ಕೂಡ್ಲಿಗಿ ಬಳಿ ಕಾರು-ಲಾರಿ ಮಧ್ಯೆ ಭೀಕರ ರಸ್ತೆ ಅಪಘಾತ : ನಾಲ್ವರ ದುರ್ಮರಣ

ಈ ಸುದ್ದಿಯನ್ನು ಶೇರ್ ಮಾಡಿ

deadly--accident

ಬಳ್ಳಾರಿ, ಆ.18-ಜಿಲ್ಲೆಯ ಕೂಡ್ಲಿಗಿ ಬಳಿ ಇಂದು ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪಿರುವ ದಾರುಣ ಘಟನೆ ನಡೆದಿದೆ.ಮೃತರೆಲ್ಲರೂ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನವರಾಗಿದ್ದು, ಬಸವರಾಜ್ (25), ಶಿವಾನಂದ (25), ಮಂಜುನಾಥ್(30) ಮತ್ತು ಕಿರಣ್ (28) ಎಂದು ಗುರುತಿಸಲಾಗಿದೆ.

ಘಟನೆ ವಿವರ:

ಜಿಲ್ಲೆಯ ಕೂಡ್ಲಿಗಿ ತಾಲೂಕು ಶಿವಪುರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಇಂದು ಬೆಳಗ್ಗೆ ಲಾರಿ ಮತ್ತು ಕಾರಿನ ನಡುವೆ ಡಿಕ್ಕಿ ಸಂಭವಿಸಿ ಈ ದುರ್ಘಟನೆ ನಡೆದಿದೆ.ಅಪಘಾತದಿಂದ ಕಾರು ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಕೂಡ್ಲಿಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಲಾರಿ ಚಾಲಕನನ್ನು ಬಂಧಿಸಿ ಮುಂದಿನ ಕ್ರಮಕೈಗೊಂಡಿದ್ದಾರೆ.

 

► Follow us on –  Facebook / Twitter  / Google+

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin