ಕೂಲಿ ಕಾರ್ಮಿಕನ ಬರ್ಬರ ಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

kolara

ಕೋಲಾರ, ಆ.10- ಕೂಲಿ ಕಾರ್ಮಿಕನೊಬ್ಬನನ್ನು ದುಷ್ಕರ್ಮಿಗಳು ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಸೊಗಟೂರು ಗ್ರಾಮದಲ್ಲಿ ನಡೆದಿದೆ.ಸುಬ್ಬಣ್ಣ (33) ಕೊಲೆಯಾದ ವ್ಯಕ್ತಿ. ಈತ ಆಂಧ್ರಪ್ರದೇಶ ಮೂಲದವನಾಗಿದ್ದು, ಕಳೆದ 15 ವರ್ಷಗಳಿಂದ ಗ್ರಾಮದಲ್ಲಿ ನೆಲೆಸಿಕೊಂಡಿದ್ದು, ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ. ಕಳೆದ ರಾತ್ರಿ ದುಷ್ಕರ್ಮಿಗಳು ಈತನ ಮೇಲೆ ದಾಳಿ ಮಾಡಿ ಕಲ್ಲಿನಿಂದ ಮುಖವನ್ನು ಗುರುತು ಸಿಗದಂತೆ ಜಜ್ಜಿ ಹಾಕಿ ಹತ್ಯೆ ಮಾಡಿದ್ದಾರೆ. ಯಾವ ಕಾರಣಕ್ಕೆ ಹತ್ಯೆ ಮಾಡಿದ್ದಾರೆ ಎಂದು ತಿಳಿದು ಬಂದಿಲ್ಲ. ಈ ಸಂಬಂಧ ಗ್ರಾಮಾಂತರ ಠಾಣೆಯ ಪೊಲೀಸರು  ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

 

► Follow us on –  Facebook / Twitter  / Google+

Facebook Comments

Sri Raghav

Admin