ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಸವಿತಾ ರಮೇಶ್ ಆಯ್ಕೆ

ಈ ಸುದ್ದಿಯನ್ನು ಶೇರ್ ಮಾಡಿ

kr--pete

ಕೆ.ಆರ್.ಪೇಟೆ,ನ.23-ತಾಲೂಕಿನ ಅಘಲಯ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಉಪಾಧ್ಯಕ್ಷರಾಗಿ ಸವಿತಾರಮೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಈ ಹಿಂದಿನ ಉಪಾಧ್ಯಕ್ಷ ಭೈೈರೇಗೌಡ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಚುನಾವಣೆ ನಿಗಧಿಯಾಗಿತ್ತು. ಉಪಾಧ್ಯಕ್ಷ ಸ್ಥಾನ ಬಯಸಿ ಸವಿತಾ ಹೊರತು ಪಡಿಸಿ ಬೇರೆ ಯಾರೂ ನಾಮಪತ್ರ ಸಲ್ಲಿಸದ ಕಾರಣ ಚುನಾವಣಾಧಿಕಾರಿಯಾಗಿದ್ದ ತಾಲೂಕು ಸಹಕಾರ ಅಭಿವೃದ್ಧಿ ಅಧಿಕಾರಿ ಕೆ.ಗೋವಿಂದಸ್ವಾಮಿ ಅವರು ಉಪಾಧ್ಯಕ್ಷರಾಗಿ ಸವಿತಾ ಅವರು ಅವಿರೋಧವಾಗಿ ಆಯ್ಕೆಯಾಗಿರುವುದಾಗಿ ಘೋಷಣೆ ಮಾಡಿದರು.

ಸಹ ಚುನಾವಣಾಧಿಕಾರಿಯಾಗಿ ಸಂಘದ ಸಿಇಒ ಮುರುಳೀಧರ್ ಕಾರ್ಯನಿರ್ವಹಿಸಿದರು. ನೂತನ ಉಪಾಧ್ಯಕ್ಷೆ ಸವಿತಾರಮೇಶ್ ಅವರನ್ನು ಸಂಘದ ಅಧ್ಯಕ್ಷ ರಾಜೇಗೌಡ, ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ಎ.ಎಸ್.ಶ್ರೀಧರ್, ಗ್ರಾ.ಪಂ.ಅಧ್ಯಕ್ಷ ಶಾಂತರಾಜು, ಮಾಜಿ ಅಧ್ಯಕ್ಷ ಮಂಜುನಾಥ್, ಸಂಘದ ನಿರ್ದೇಶಕರಾದ ಎನ್.ಎಸ್.ಮಂಜೇಗೌಡ, ಕುಮಾರ್, ಮಂಜು, ರಾಜೇಶ್, ರಾಘವೇಂದ್ರ ಮತ್ತಿತರರು ಅಭಿನಂದಿಸಿದರು.

 

► Follow us on –  Facebook / Twitter  / Google+

Facebook Comments

Sri Raghav

Admin