ಕೃಷ್ಣ ನಗರ ಬಡಾವಣೆ ಸೆಪ್ಟಂಬರ್‍ನಲ್ಲಿ ನಿವೇಶನ ಹಂಚಿಕೆ

ಈ ಸುದ್ದಿಯನ್ನು ಶೇರ್ ಮಾಡಿ

District--Minister-m-manju

ಹಾಸನ, ಆ.9- ಹೊರವಲಯದಲ್ಲಿ ನಿರ್ಮಾಣಗೊಳ್ಳುತ್ತಿರುವ ಕೃಷ್ಣ ನಗರ ಬಡಾವಣೆಯ ನಿವೇಶನಗಳನ್ನು ಸೆಪ್ಟಂಬರ್ ಮೊದಲ ವಾರದಲ್ಲಿ ಹಂಚಿಕೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎ.ಮಂಜು ತಿಳಿಸಿದ್ದಾರೆ.ಕೃಷ್ಣ ನಗರ ಬಡಾವಣೆಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿದ ಸಚಿವರು ಬಡಾವಣೆಯನ್ನು ಅತ್ಯಾಧುನಿಕವಾಗಿ ಹೊಸ ತಂತ್ರಜ್ಞಾನಗಳೊಂದಿಗೆ ವಿನ್ಯಾಸಗೊಳಿಸುತ್ತಿದ್ದು ಕಾಮಗಾರಿ ತ್ವರಿತವಾಗಿ ನಡೆಯುತ್ತಿದೆ ಎಂದರು.
ಬಡಾವಣೆಗೆ ಜಮೀನನ್ನು ನೀಡಿರುವ ರೈತರಿಗೆ ಸೆಪ್ಟಂಬರ್ ಮೊದಲ ವಾರದಲ್ಲಿ ಹಂತ ಹಂತವಾಗಿ ನಿವೇಶನವನ್ನು ಹಂಚಿಕೆ ಮಾಡಲಾಗುವುದು. ಆ ನಂತರ ಅರ್ಜಿ ಸಲ್ಲಿಸಿರುವ ಫಲಾನುಭವಿಗಳಿಗೆ ನಿವೇಶನ ದೊರೆಯಲಿದೆ ಎಂದು ಹೇಳಿದರು.ಆದಷ್ಟು ಚುರುಕಾಗಿ ಮತ್ತು ಗುಣಮಟ್ಟದಿಂದ ಕಾಮಗಾರಿ ಕೈಗೊಳ್ಳಲು ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಮತ್ತು ಗುತ್ತಿಗೆದಾರರಿಗೆ ಸೂಚಿಸಲಾಗಿದೆ. ಜೊತೆಗೆ ಅರಸೀಕೆರೆ ರಸ್ತೆ ಕಾಮಗಾರಿ ಕೂಡ ನಡೆಯಲಿದೆ ಎಂದು ಸಚಿವರು ಹೇಳಿದರು.
ಜಿಲ್ಲೆಯಲ್ಲಿ ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್ ನೆರವಿನಿಂದ ಸುಸಜ್ಜಿತ ಕ್ರೀಡಾಂಗಣ ನಿರ್ಮಾಣ ಮಾಡಲು ಉದ್ದೇಶಿಸಲಾಗಿದ್ದು ಶ್ರವಣಬೆಳಗೊಳ ಅಥವಾ ನಗರದ ಕ್ರೃಷ್ಣಾ ನಗರ ಬಡಾವಣೆಯಲ್ಲಿ ಇದನ್ನು ನಿರ್ಮಿಸಲು ಚಿಂತಿಸಲಾಗಿದೆ ಎಂದು ಹೇಳಿದರು.ಹುಡಾ ಆಯುಕ್ತರಾದ ರಮೇಶ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Facebook Comments

Sri Raghav

Admin