ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸಲು ಮೆಟ್ರೋ ರೈಲು

ಈ ಸುದ್ದಿಯನ್ನು ಶೇರ್ ಮಾಡಿ

Metro-BNG

ಬೆಂಗಳೂರು, ಜ.13-ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ 30 ಕಿ.ಮೀ. ಉದ್ದದ ಮೆಟ್ರೋ ಮಾರ್ಗ ನಿರ್ಮಿಸಲು ಆರು ಮಾರ್ಗಗಳನ್ನು ಗುರುತಿಸಲಾಗಿದೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿಂದು ನಡೆದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮೆಟ್ರೋ ರೈಲು ಸಂಪರ್ಕ ಕಲ್ಪಿಸುವ ಸಂಬಂಧ ನಡೆದ ಉನ್ನತ ಮಟ್ಟದ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಆರು ಮಾರ್ಗಗಳ ಪೈಕಿ ಒಂದು ಮಾರ್ಗವನ್ನು ಅಂತಿಮಗೊಳಿಸಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ಈಗಾಗಲೇ ಗುರುತಿಸಲಾಗಿರುವ ಮಾರ್ಗಗಳ ಬಗ್ಗೆ ಸಾರ್ವಜನಿಕ ಸಲಹೆ ಮತ್ತು ಆಕ್ಷೇಪಗಳನ್ನು ಆಹ್ವಾನಿಸಲಾಗಿದೆ ಎಂದು ಹೇಳಿದರು.

ಉದ್ದೇಶಿತ ಮೆಟ್ರೋ ರೈಲು ಮಾರ್ಗ ನಿರ್ಮಾಣಕ್ಕೆ ಸುಮಾರು 6 ಸಾವಿರ ಕೋಟಿ ರೂ. ವೆಚ್ಚವಾಗಲಿದೆ. ಬೆಂಗಳೂರಿಗೆ ಆರು ಸಬ್‍ಅರ್ಬನ್ ರೈಲು ಸಂಪರ್ಕ ಕಲ್ಪಿಸಲು 360 ಕೋಟಿ ರೂ. ವೆಚ್ಚದ ಯೋಜನೆಯನ್ನು ಅನುಷ್ಟಾನಗೊಳಿಸಲು ಕ್ರಮಕೈಗೊಳ್ಳಲಾಗಿದೆ. ಕೇಂದ್ರ ವಿಮಾನಯಾನ ರಾಜ್ಯ ಸಚಿವ ಜಯಂತ್‍ಸಿನ್ಹಾ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಹಸಿರುವ ನಿಶಾನೆ ತೋರಿಸಿದ್ದಾರೆ ಎಂದರು. ಕೇಂದ್ರ ಮತ್ತು ರಾಜ್ಯ ಸರ್ಕಾರ ಶೇ.50ರ ಸಮ ಪಾಲುದಾರಿಕೆಯಲ್ಲಿ ಮೆಟ್ರೋ ರೈಲು ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ ಎಂದು ಹೇಳಿದರು.
ಸಭೆಯಲ್ಲಿ ಕೇಂದ್ರ ವಿಮಾನಯಾನ ಖಾತೆ ರಾಜ್ಯ ಸಚಿವ ಜಯಂತ್‍ಸಿನ್ಹಾ, ಬೆಂಗಳೂರು ಮೆಟ್ರೋರೈಲು ವ್ಯವಸ್ಥಾಪಕ ನಿರ್ದೇಶಕ ಪ್ರದೀಪ್‍ಸಿಂಗ್ ಕರೋಲಾ, ಬೆಂಗಳೂರು ನಗರ ಆಯುಕ್ತ ರಾಜ್‍ಕುಮಾರ್ ಕತ್ರಿ ಸೇರಿದಂತೆ ಮತ್ತಿತರ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android /

Facebook Comments

Sri Raghav

Admin