ಕೆಆರ್‍ಎಸ್ ಅಣೆಕಟ್ಟೆಗೆ ಪೊಲೀಸ್ ಭದ್ರತೆ

ಈ ಸುದ್ದಿಯನ್ನು ಶೇರ್ ಮಾಡಿ

KRS-Dam
ಮಂಡ್ಯ,ಫೆ.14- ನೀರು ಬಿಡುವಂತೆ ತಮಿಳುನಾಡು ಸರ್ಕಾರ ಮಾಡಿದ್ದ ಮನವಿಯನ್ನು ತಿರಸ್ಕರಿಸಲಾದ ಹಿನ್ನೆಲೆಯಲ್ಲಿ ಕೆಆರ್‍ಎಸ್ ಅಣೆಕಟ್ಟೆಗೆ ಪೊಲೀಸ್ ಭದ್ರತೆಯನ್ನು ಹೆಚ್ಚಿಸಲಾಗಿದೆ. ಕೆಆರ್‍ಎಸ್ ಅಣೆಕಟ್ಟೆಯ ಸಮೀಪ ಬ್ಯಾರಿಕೇಡ್‍ಗಳನ್ನು ಹಾಕಿ ಹದ್ದಿನ ಕಣ್ಣಿಟ್ಟಿರುವ ಪೊಲೀಸರು ತಮಿಳುನಾಡಿನ ನೋಂದಣಿ ಸಂಖ್ಯೆ ಇರುವ ವಾಹನಗಳನ್ನು ತಪಾಸಣೆ ನಡೆಸುತ್ತಿದ್ದಾರೆ.  ತಮಿಳುನಾಡಿನ ಅಧಿಕಾರಿಗಳು ಅಣೆಕಟ್ಟೆ ವೀಕ್ಷಣೆ ಕುರಿತಂತೆ ಊಹಪೋಹ ಎದ್ದಿರುವ ಹಿನ್ನೆಲೆಯಲ್ಲಿ ಈ ಬಂದೋಬಸ್ತ್ ಮಾಡಲಾಗಿದೆ. ಜಲಾಶಯದಲ್ಲಿ ನೀರಿಲ್ಲದ ಕಾರಣ ತಮಿಳುನಾಡಿಗೆ ಪೂರೈಸಲು ಸಾಧ್ಯವಿಲ್ಲ ಎಂದು ಸರ್ಕಾರ ಈಗಾಗಲೇ ಸ್ಪಷ್ಟಪಡಿಸಿದೆ. ತಮಿಳನಾಡು ಮುಖ್ಯಮಂತ್ರಿ ಯಡಪ್ಪಾಡಿ ಕೆ.ಪಳನಿಸ್ವಾಮಿ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಈ ಬಗ್ಗೆ ಮನವಿಗಳನ್ನು ಸಲ್ಲಿಸಿದ್ದಾರೆ.

Facebook Comments

Sri Raghav

Admin