ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ಮುಖಾಮುಖಿ ಡಿಕ್ಕಿ : ಸ್ಥಳದಲ್ಲೇ ಬೈಕ್ ಸವಾರರಿಬ್ಬರ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

bIKE

ತುಮಕೂರು,ಆ.22-ಕೆಎಸ್ಆರ್ಟಿಸಿ ಬಸ್ ಮತ್ತು ದ್ವಿಚಕ್ರ ವಾಹನ ಮುಖಾಮುಖಿ ಡಿಕ್ಕಿ ಸಂಭವಿಸಿದ ಹಿನ್ನೆಲೆಯಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ. ಬೆಂಗಳೂರಿನ ಬೊಮ್ಮನಹಳ್ಳಿ ನಿವಾಸಿಗಳಾದ ಬಾಲರಾಜ್(27), ಚಿಕ್ಕಣ್ಣ(25) ಮೃತಪಟ್ಟ ದುರ್ದೈವಿಗಳು.   ರಾತ್ರಿ ತುಮಕೂರು ಜಿಲ್ಲೆಯ ಸಿದ್ದಗಂಗಾ ಮಠದಲ್ಲಿರುವ ಕಲ್ಯಾಣ ಮಂಟಪದಲ್ಲಿ ತನ್ನ ಸ್ನೇಹಿತನ ಮದುವೆಗೆ ತೆರಳಿದ್ದರು. ಮದುವೆ ಮುಗಿಸಿಕೊಂಡು ಬೆಂಗಳೂರಿಗೆ ಹಿಂದಿರುಗುತ್ತಿರುವಾಗ ರಾಷ್ಟ್ರೀಯ ಹೆದ್ದಾರಿ 4ರ ಸಮೀಪವಿರುವ ಬಟ್ವಾಡಿ ಬಳಿಯ ಮಿರ್ಚೆ ಪೆಟ್ರೋಲ್ ಬಂಕ್ ಸಮೀಪ ಬೆಂಗಳೂರಿನಿಂದ ತುಮಕೂರಿಗೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿ ಹೊಡೆದಿದೆ.   ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಸ್ಥಳಕ್ಕೆ ಭೇಟಿ ನೀಡಿದ ವೃತ್ತ ನಿರೀಕ್ಷಕ ಗಂಗಲಿಂಗಯ್ಯ ಶವಗಳನ್ನು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ಸಂಚಾರಿ ಠಾಣೆ ಸಬ್ಇನ್ಸ್ಪೆಕ್ಟರ ವಿಜಯಲಕ್ಷ್ಮಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

► Follow us on –  Facebook / Twitter  / Google+

Facebook Comments

Sri Raghav

Admin