ಕೆಎಸ್ಆರ್ಟಿಸಿ-ಖಾಸಗಿ ಬಸ್ಗಳು ಮುಖಾಮುಖಿ ಡಿಕ್ಕಿ : 9 ಮಂದಿಗೆ ಗಂಭೀರ ಗಾಯ
ಈ ಸುದ್ದಿಯನ್ನು ಶೇರ್ ಮಾಡಿ
ಚಿಕ್ಕಬಳ್ಳಾಪುರ, ಮಾ.17- ಎರಡು ಬಸ್ಗಳ ಮುಖಾಮುಖಿ ಡಿಕ್ಕಿಯಿಂದಾಗಿ 9 ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ಕಡೆಯಿಂದ ಗೌರಿಬಿದನೂರಿಗೆ ಹೋಗುವ ಕಣಿವೆ ತಿರುವಿನಲ್ಲಿ ಈ ಘಟನೆ ನಡೆದಿದ್ದು, ಚಿಕ್ಕಬಳ್ಳಾಪುರ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಕೆಎಸ್ಆರ್ಟಿಸಿ ಹಾಗೂ ಖಾಸಗಿ ಬಸ್ಗಳ ನಡುವೆ ಡಿಕ್ಕಿ ಸಂಭವಿಸಿದೆ.
ಚಿಕ್ಕಬಳ್ಳಾಪುರದಿಂದ ಗೌರಿಬಿದನೂರಿಗೆ ತೆರಳುವ ಕಣಿವೆ ಪ್ರದೇಶ ಕಿರಿದಾಗಿದ್ದು, ಎರಡು ಕಾರುಗಳು ಚಲಿಸಬಹುದಾದ ಈ ರಸ್ತೆಯಲ್ಲಿ ಒಂದೇ ಬಾರಿಗೆ ಎರಡೂ ಬಸ್ಗಳು ಒಟ್ಟೊಟ್ಟಿಗೆ ಸಂಚರಿಸಿದ ಪರಿಣಾಮದಿಂದಾಗಿ ಇಂತಹ ಅವಘಡಗಳು ಪದೇ ಪದೇ ನಡೆಯುತ್ತಲೇ ಇವೆ. ಇದರಿಂದಾಗಿ ಸಾರ್ವಜನಿಕ, ಪ್ರಯಾಣಿಕರ ಪ್ರಾಣದೊಂದಿಗೆ ಚಲ್ಲಾಟವಾಡುವ ಚಾಲಕರ ವಿರುದ್ಧ ಕ್ರಮ ಕೈಗೊಳ್ಳಬೇಕಿದೆ ಎಂಬುದು ಪ್ರಯಾಣಿಕರ ಅಳಲು.ಈ ಬಗ್ಗೆ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಕೊಂಡು ಮುಂದಿನ ಕ್ರಮ ಜರುಗಿಸಿದ್ದಾರೆ.
Facebook Comments