ಕೆಎಸ್‍ಆರ್‍ಟಿಸಿಗೆ ‘ಇಂಡಿಯಾ ಪ್ರೈಡ್-2017’ ಪ್ರಶಸ್ತಿ

ಈ ಸುದ್ದಿಯನ್ನು ಶೇರ್ ಮಾಡಿ

KSRTC

ಬೆಂಗಳೂರು, ಮಾ.28-ಮೂಲಭೂತ ಸೌಲಭ್ಯಗಳ ಅಭಿವೃದ್ಧಿ ಮತ್ತು ಸಾರಿಗೆ ಸೌಕರ್ಯದಲ್ಲಿನ ಗಣನೀಯ ಪ್ರಗತಿಗಾಗಿ ಕೆಎಸ್‍ಆರ್‍ಟಿಸಿಗೆ ಇಂಡಿಯಾ ಪ್ರೈಡ್-2017 ಪ್ರಶಸ್ತಿ ಲಭಿಸಿದೆ. ಸಂಸ್ಥೆಯು ಈ ಪ್ರಶಸ್ತಿಯನ್ನು ಸತತ ಎರಡನೇ ಬಾರಿಗೆ ಪಡೆದುಕೊಂಡಿರುವುದು ವಿಶೇಷ.  ಪ್ರಶಸ್ತಿಯನ್ನು ದೈನಿಕ ಭಾಸ್ಕರ್ ಸಂಸ್ಥೆ ಪ್ರತಿಷ್ಠಾಪಿಸಿದ್ದು, ನವದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ಕೇಂದ್ರದ ದೂರಸಂಪರ್ಕ ಸಚಿವ ಮನೋಜ್ ಸಿನ್ಹಾ ಅವರು ಕೆಎಸ್‍ಆರ್‍ಟಿಸಿ ವ್ಯವಸ್ಥಾಪಕ ನಿರ್ದೇಶಕ ಎಸ್.ಆರ್.ಉಮಾಶಂಕರ್ ಅವರಿಗೆ ಪ್ರದಾನ ಮಾಡಿದರು. ರಾಷ್ಟ್ರ ನಿರ್ಮಾಣದಲ್ಲಿ ಸಾರ್ವಜನಿಕ ವಲಯದ ಉದ್ದಿಮೆಗಳು ಸಲ್ಲಿಸಿರುವ ಕೊಡುಗೆಗಳನ್ನು ಗುರುತಿಸಿ ಕೃಷಿ, ವಿದ್ಯುತ್, ಮೂಲಭೂತ ಸೌಕರ್ಯ, ಸಾರಿಗೆ, ನೀರು ಮತ್ತು ಆರೋಗ್ಯ ಕ್ಷೇತ್ರಗಳಲ್ಲಿನ ಉತ್ಕøಷ್ಟತಾ ಸೇವೆಯನ್ನು ಪರಿಗಣಿಸಿ ಪ್ರಶಸ್ತಿಯನ್ನು ನೀಡಲಾಗುತ್ತದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin