ಕೆಎಸ್ಆರ್ಟಿಸಿ ಬಸ್ ಡಿಕ್ಕಿ: ವಿದ್ಯಾರ್ಥಿ ಸಾವು
ಮಂಡ್ಯ, ಸೆ.27- ರಸ್ತೆ ಬದಿ ನಿಂತಿದ್ದ ವಿದ್ಯಾರ್ಥಿಗೆ ವೇಗವಾಗಿ ಬಂದ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿರುವ ಘಟನೆ ಮಂಡ್ಯ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ತಾಲ್ಲೂಕಿನ ಹನ್ಕೆರೆ ಗ್ರಾಮದ ರೈತ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿ ದಿಲೀಪ್(13) ಮೃತ ದುರ್ದೈವಿ.ಬೂದನೂರು ಗ್ರಾಮದವನಾದ ದಿಲೀಪ್ ಹನ್ಕೆರೆಯ ರೈತ ಶಿಕ್ಷಣ ಸಂಸ್ಥೆಯಲ್ಲಿ 8ನೇ ತರಗತಿ ವ್ಯಾಸಂಗ ಮಾಡುತ್ತಿದ್ದ. ಎಂದಿನಂತೆ ಶಾಲೆ ಮುಗಿಸಿಕೊಂಡು ಮನೆಗೆ ಹಿಂತಿರುಗಲು ಹನ್ಕೆರೆ ಬಳಿ ಬಸ್ಸಿಗಾಗಿ ಕಾಯುತ್ತಿದ್ದ ವೇಳೆ ವೇಗವಾಗಿ ಬಂದ ಕೆಎಸ್ಆರ್ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಆತನಿಗೆ ಡಿಕ್ಕಿ ಹೊಡೆದಿದೆ.
ಇದನ್ನು ಗಮನಿಸಿದ ಸ್ಥಳೀಯರು ಸರ್ಕಾರಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆದರೆ, ಚಿಕಿತ್ಸೆ ಫಲಿಸದೆ ವಿದ್ಯಾರ್ಥಿ ಕೊನೆಯುಸಿರೆಳೆದಿದ್ದಾನೆ.
ಈ ಸಂಬಂಧ ಮಂಡ್ಯ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಸ್ ಚಾಲಕನನ್ನು ಪೆÇಲೀಸರು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ.
► Follow us on – Facebook / Twitter / Google+