ಕೆಟ್ಟು ನಿಂತಿದ್ದ ಕ್ಯಾಂಟರ್‍ ಗೆ ಟಾಟಾ ವಿಂಗರ್ ಡಿಕ್ಕಿ : ಸ್ಥಳದಲ್ಲೇ ನಾಲ್ವರ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

ಕುಣಿಗಲ್, ಆ.14- ಅತಿವೇಗವಾಗಿ ಬಂದ ಟಾಟಾ ವಿಂಗರ್ ವಾಹನವೊಂದು ಕೆಟ್ಟು ನಿಂತಿದ್ದ ಕ್ಯಾಂಟರ್‍ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿ , ಎಂಟು ಜನ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.  ಹೊಳೆನರಸೀಪುರ ನಿವಾಸಿ ಶೇಖರ್(36), ಮನೋಹರ್(31) ಸ್ಥಳದಲ್ಲೇ ಸಾವನ್ನಪ್ಪಿ , ಇನ್ನಿಬ್ಬರ ಹೆಸರು ತಿಳಿದುಬಂದಿಲ್ಲ.

ಘಟನೆ ವಿವರ: ನಿನ್ನೆ ರಾತ್ರಿ 10 ಗಂಟೆ ಸಮಯದಲ್ಲಿ ಬೆಂಗಳೂರಿನ ಪೀಣ್ಯದಿಂದ ಪ್ರಯಾಣಿಕರನ್ನು  ಕರೆದುಕೊಂಡು ಚನ್ನಪಟ್ಟಣಕ್ಕೆ ತೆರಳುತ್ತಿದ್ದ ಟಾಟಾ ವಿಂಗರ್ ವಾಹನ ಅತಿವೇಗವಾಗಿ ಬಂದು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕೆಟ್ಟು ನಿಂತಿದ್ದ ಕ್ಯಾಂಟರ್‍ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದಾರೆ.  ರಂಗಪ್ಪ  ರಂಗನಾಥ್, ಲೋಕೇಶ್, ಸಿದ್ದ , ಐಶ್ವರ್ಯ, ಆನಂದ್ ಎಂಬುವರು ಗಾಯಗೊಂಡಿದ್ದು , ಬೆಳ್ಳೂರು ಕ್ರಾಸ್‍ನ ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲು ಮಾಡಿದ್ದು, ಶ್ವೇತಾ, ಸವಿತಾ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದರಿಂದ ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆ ದಾಖಲು ಮಾಡಲಾಗಿದೆ.   ಸಿಪಿಐ ಬಾಳೇಗೌಡ, ಪಿಎಸ್‍ಐ ಕೇಶವಮೂರ್ತಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಶವಗಳನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ.  ಇನ್ನಿಬ್ಬರ ಹೆಸರು, ವಿಳಾಸ ತಿಳಿದುಬಂದ್ಲಿಲ. ಕುಣಿಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

► Follow us on –  Facebook / Twitter  / Google+

Facebook Comments

Sri Raghav

Admin