ಕೆಪಿಎಸ್ಸಿ ಹುದ್ದೆಗಳ ಆಯ್ಕೆ ಪ್ರಕ್ರಿಯೆ ಅನುಪಾತದಲ್ಲಿ ಹೆಚ್ಚಳ

ಈ ಸುದ್ದಿಯನ್ನು ಶೇರ್ ಮಾಡಿ

KPSC

ಬೆಂಗಳೂರು,ಆ.22– ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ಸಂದರ್ಶನದ ಅನುಪಾತದ ಪ್ರಮಾಣವನ್ನು 1:3 ಪ್ರಕ್ರಿಯೆಯಿಂದ 1:5ಗೆ ಹೆಚ್ಚಳ ಮಾಡಲು ನಿರ್ಧರಿಸಲಾಗಿದೆ.   ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಕರ್ನಾಟಕ ಲೋಕ ಸೇವಾ ಆಯೋಗದ ನಿಯಮಗಳಿಗೆ ತಿದ್ದುಪಡಿ ತರಲು ತೀರ್ಮಾನಿಸಲಾಗಿದೆ. ಇದರಿಂದ ಉದ್ಯೋಗಾಕಾಂಕ್ಷಿಗಳಿಗೆ ಅನುಕೂಲವಾಗಲಿದ್ದು, ಹೆಚ್ಚು ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು. ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳು ಮುಖ್ಯ ಪರೀಕ್ಷೆ ನಂತರ ನಡೆಯುವ ಸಂದರ್ಶನಕ್ಕೆ ಪೂರಕವಾಗಿ ಕೆಪಿಎಸ್ಸಿ ನಿಯಮಗಳಿಗೆ ತಿದ್ದುಪಡಿ ತರಲು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಸಂದರ್ಶನ ಅನುಪಾತ ಹೆಚ್ಚಳದಿಂದ ಎಲ್ಲ ವರ್ಗಗಳ ಹಾಗೂ ಗ್ರಾಮೀಣ ಅಭ್ಯರ್ಥಿಗಳಿಗೆ ಅನುಕೂಲವಾಗಲಿದೆ. ಅಲ್ಲದೆ ರಾಜ್ಯ ಸರ್ಕಾರ ವಿವಿಧ ನಿಗಮ ಮಂಡಳಿಗಳ ಹುದ್ದೆಗಳಿಗೆ ನಡೆಯುವ ನೇಮಕಾತಿ ಸಂದರ್ಭದಲ್ಲಿ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಟ ಶೇ.60ರಷ್ಟು ಅಂಕ ಗಳಿಸುವುದನ್ನು ಕಡ್ಡಾಯಗೊಳಿಸಲಾಗಿದೆ.  ನಿಯಮವನ್ನು ಸರಿಪಡಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಈ ಸಂಬಂಧ ಸೂಕ್ತ ತಿದ್ದುಪಡಿ ತರಲು ಮುಖ್ಯಮಂತ್ರಿ ಸೂಚಿಸಿದ್ದಾರೆ.   ಪದವಿ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರುವ ಎಲ್ಲ ಅಭ್ಯರ್ಥಿಗಳು ಕೂಡ ಅರ್ಜಿ ಸಲ್ಲಿಸಲು ಅರ್ಹತೆಯಿದೆ. ಲಿಖಿತ ಪರೀಕ್ಷೆಗಳಿಗೆ ಹಾಜರಾಗುವ ಅವಕಾಶ ದೊರೆಯಲಿದೆ. ಸಭೆಯಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಕರ್ನಾಟಕ ಲೋಕಸೇವಾ ಆಯೋಗದ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.

► Follow us on –  Facebook / Twitter  / Google+

Facebook Comments

Sri Raghav

Admin