ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ ಪೂರೈಸಿದ ಪರಮೇಶ್ವರ್’ಗೆ ನಾಳೆ ಅಭಿನಂದನಾ ಸಮಾರಂಭ

ಈ ಸುದ್ದಿಯನ್ನು ಶೇರ್ ಮಾಡಿ

param
ಬೆಂಗಳೂರು, ಅ.26- ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರು ಕೆಪಿಸಿಸಿಯ ಅಧ್ಯಕ್ಷ ಪಟ್ಟ ವಹಿಸಿಕೊಂಡು 6 ವರ್ಷಗಳು ಯಶಸ್ವಿಯಾಗಿ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ನಾಳೆ ಅರಮನೆ ಮೈದಾನದಲ್ಲಿ ಅಭಿನಂದನಾ ಸಮಾರಂಭ ವನ್ನು ಹಮ್ಮಿಕೊಳ್ಳಲಾಗಿದೆ.ಸುರಾಜ್ಯ ಸಮಾವೇಶ ಎಂಬ ಕಾರ್ಯಕ್ರಮವನ್ನು ಕೆಪಿಸಿಸಿ ಹಾಗೂ ಪರಮೇಶ್ವರ್ ಅಭಿಮಾನಿಗಳು ಅರಮನೆ ಮೈದಾನದ ನಲ್ಪಾಡ್ ಪೆವಿಲಿಯನ್‍ನಲ್ಲಿ ಏರ್ಪಡಿಸಿದ್ದು, ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್‍ಸಿಂಗ್, ಸಂಪುಟದ ಸಹೋದ್ಯೋಗಿಗಳು ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಸತತವಾಗಿ ಆರು ವರ್ಷಗಳ ಕಾಲ ಕೆಪಿಸಿಸಿ ಹುದ್ದೆಯನ್ನು ಸಮರ್ಥವಾಗಿ ನಿರ್ವಹಿಸಿದ ಕೀರ್ತಿಗೆ ಪರಮೇಶ್ವರ್ ಅವರು ಪಾತ್ರರಾಗಿದ್ದಾರೆ. ಇವರ ಅಧ್ಯಕ್ಷತೆ ಅವಧಿಯಲ್ಲಿ ಪಕ್ಷ ಅಧಿಕಾರಕ್ಕೆ ಬಂದಿರುವುದು ಹೆಮ್ಮೆಯ ವಿಷಯ.ಕರ್ನಾಟಕದಲ್ಲಿ ಇಷ್ಟು ಸುದೀರ್ಘ ಪ್ರದೇಶ್ ಕಾಂಗ್ರೆಸ್ ಅಧ್ಯಕ್ಷ ಹುದ್ದೆಯನ್ನು ಯಾರೂ ನಿಭಾಯಿಸಿರಲಿಲ್ಲ. ಡಾ.ಜಿ.ಪರಮೇಶ್ವರ್ ಈ ಹೊಣೆಗಾರಿಕೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ.ಗ್ರಾಮ ಪಂಚಾಯ್ತಿಯಿಂದ ಹಿಡಿದು ವಿಧಾನಸೌಧದವರೆಗೂ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಮಹತ್ತರ ಪಾತ್ರವನ್ನು ವಹಿಸಿದ್ದಾರೆ. ಹೀಗಾಗಿ ಕಾಂಗ್ರೆಸ್ ಹೈಕಮಾಂಡ್ ಅವರನ್ನು ಈ ಹುದ್ದೆಯಲ್ಲಿಯೇ ಮುಂದುವರೆಸುತ್ತಾ ಬಂದಿದೆ. ಇದರ ಜೊತೆಗೆ ಗೃಹ ಸಚಿವರ ಜವಾಬ್ದಾರಿಯನ್ನೂ ಕೂಡ ಅವರು ನಿರ್ವಹಿಸುತ್ತಿದ್ದಾರೆ. ಆರು ವರ್ಷಗಳು ಪೂರೈಸಿದ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು, ಬೆಂಬಲಿಗರು, ಪಕ್ಷದ ಕಾರ್ಯಕರ್ತರು ಅಭಿನಂದನಾ ಸಮಾರಂಭವನ್ನು ನಾಳೆ ಹಮ್ಮಿಕೊಂಡಿದ್ದಾರೆ.

► Follow us on –  Facebook / Twitter  / Google+

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin