ಕೆಪಿಸಿಸಿ ಅಧ್ಯಕ್ಷ ಹುದ್ದೆಯ ನಾನು ಕಣ್ಣಿಟ್ಟಿಲ್ಲ : ಎಂ.ಬಿ.ಪಾಟೀಲ್

ಈ ಸುದ್ದಿಯನ್ನು ಶೇರ್ ಮಾಡಿ

M.B.Patil

ಬಿಜಾಪುರ,ಏ.30-ನಾನು ಕೆಪಿಸಿಸಿ ಹುದ್ದೆ ಆಕಾಂಕ್ಷಿಯಲ್ಲ. ಆ ಹುದ್ದೆ ಮೇಲೆ ಕಣ್ಣಿಟ್ಟು ಲಾಬಿ ಕೂಡ ಮಾಡುತ್ತಿಲ್ಲ ಎಂದು ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ. ಬಿಜಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಕೆಪಿಸಿಸಿ ಅಧ್ಯಕ್ಷರ ಹುದ್ದೆ ನೇಮಕ ಹೈಕಮಾಂಡ್‍ಗೆ ಬಿಟ್ಟ ವಿಚಾರ. ನಾನು ಆ ಹುದ್ದೆಯ ಆಕಾಂಕ್ಷಿಯಲ್ಲ. ಪಕ್ಷದ ನಿಷ್ಠಾವಂತ ಕಾರ್ಯಕರ್ತ. ಪಕ್ಷ ಯಾವುದೇ ಜವಾಬ್ದಾರಿ ಕೊಟ್ಟರೂ ನಿರ್ವಹಿಸಲು ಸಿದ್ದನಿದ್ದೇನೆ.   ಈ ಹಿಂದೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಕರೆದು ಹುದ್ದೆ ನಿರ್ವಹಿಸುವಂತೆ ಸೂಚಿಸಿದ್ದರು. ಆದರೆ ಜಲಸಂಪನ್ಮೂಲ ಇಲಾಖೆ ಜವಾಬ್ದಾರಿ ಹೊತ್ತಿದ್ದ ನಾನು ಹಲವು ಮಹತ್ವದ ಯೋಜನೆಗಳನ್ನು ಪೂರೈಸಬೇಕಾಗಿತ್ತು. ಹಾಗಾಗಿ ಒಪ್ಪಿಕೊಂಡಿರಲಿಲ್ಲ.ಯಾವುದೇ ಕಾರಣಕ್ಕೂ ಆ ಹುದ್ದೆ ಪಡೆಯಲು ಲಾಭಿ ಮಾಡುವುದಿಲ್ಲ. ಉತ್ತರ ಕರ್ನಾಟಕ ಭಾಗದ ಲಿಂಗಾಯಿತ ಸಮುದಾಯದವೊಬ್ಬರಿಗೆ ಕೆಪಿಸಿಸಿಯ ಹುದ್ದೆ ಸಿಕ್ಕರೆ ಪಕ್ಷಕ್ಕೆ ಅನುಕೂಲವಾಗುತ್ತದೆ ಎಂಬುದು ನಮ್ಮ ಅಭಿಪ್ರಾಯವಾಗಿದೆ.   ಹೈಕಮಾಂಡ್ ಯಾವ ನಿರ್ಧಾರ ತೆಗೆದುಕೊಳ್ಳುತ್ತದೆ ಅದಕ್ಕೆ ನಾವು ಬದ್ದರಾಗುತ್ತೇವೆ ಎಂದು ಎಂ.ಬಿ.ಪಾಟೀಲ್ ಹೇಳಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin