ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳ

ಈ ಸುದ್ದಿಯನ್ನು ಶೇರ್ ಮಾಡಿ

Sallary

ನವದೆಹಲಿ. ಮಾ .05: ಜನವರಿ 1 ರಿಂದಲೇ ಅನ್ವಯವಾಗುವಂತೆ ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇ. 2-4 ರಷ್ಟು ಹೆಚ್ಚಿಸುವ ಸಾಧ್ಯತೆಯಿದ್ದು, 50 ಲಕ್ಷ ನೌಕರರು ಮತ್ತು 58 ಲಕ್ಷ ಪಿಂಚಣಿದಾರರಿಗೆ ಸದ್ಯದಲ್ಲೇ ಸಿಹಿ ಸುದ್ದಿ ಸಿಗುವ ಸಾಧ್ಯತೆಗಳಿವೆ.  ಹಣದುಬ್ಬರದ ಪರಿಣಾಮವನ್ನು ಸರಿದೂಗಿಸುವ ನಿಟ್ಟಿನಲ್ಲಿ ಸರ್ಕಾರ ತುಟ್ಟಿಭತ್ಯೆಯನ್ನು ಹೆಚ್ಚಳ ಮಾಡಲಾಗುತ್ತಿದೆ. ಆದರೆ, ಈಗ ಹೆಚ್ಚಳ ಮಾಡಲಿರುವ ತುಟ್ಟಿಭತ್ಯೆಯ ಬಗ್ಗೆ ನೌಕರ ವಲಯದಲ್ಲಿ ಅಸಮಾಧಾನ ವ್ಯಕ್ತವಾಗಿದೆ. ಈಗಿನ ಬೆಲೆ ಏರಿಕೆಗೆ ಹೋಲಿಸಿದಾಗ, ಪ್ರಸ್ತಾಪಿಸಲಾಗಿರುವ ತುಟ್ಟಿಭತ್ಯೆಯನ್ನು ಸರಿದೂಗಿಸಲು ಆಗುವುದಿಲ್ಲ ಎಂದು ಕೇಂದ್ರ ಸರ್ಕಾರಿ ನೌಕರರ ಒಕ್ಕೂಟದ ಪ್ರಮುಖರು ತಿಳಿಸಿದ್ದಾರೆ.  ಒಕ್ಕೂಟದ ಅಧ್ಯಕ್ಷ ಕೆ.ಕೆ.ಎನ್. ಕುಟ್ಟಿ ಈ ಕುರಿತು ಮಾಹಿತಿ ನೀಡಿದ್ದು, ಶೇ. 2 ರಷ್ಟು ತುಟ್ಟಿ ಭತ್ಯೆ ಏರಿಕೆಯಾಗುವ ಸಾಧ್ಯತೆ ಇದೆ. ಪ್ರಸ್ತಾವಿತ ತುಟ್ಟಿ ಭತ್ಯೆ ತೃಪ್ತಿಕರವಾಗಿಲ್ಲ ಎಂದು ತಿಳಿಸಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin