ಕೆ.ಆರ್.ಪುರಂನಲ್ಲಿ ಇಬ್ಬರನ್ನು ಅಡ್ಡಗಟ್ಟಿ ಚಾಕುವಿನಿಂದ ಬೆದರಿಸಿ 54 ಸಾವಿರ ಹಣ ದರೋಡೆ
ಬೆಂಗಳೂರು, ಡಿ.30- ಮಧ್ಯರಾತ್ರಿ ಬೈಕ್ನಲ್ಲಿ ಬಂದ ಇಬ್ಬರು ದರೋಡೆಕೋರರು ನಡೆದು ಹೋಗುತ್ತಿದ್ದ ವ್ಯಕ್ತಿಯನ್ನು ಅಡ್ಡಗಟ್ಟಿ ಚಾಕು ತೋರಿಸಿ ಬೆದರಿಸಿ 28,600 ರೂ. ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಕೆ.ಆರ್.ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬಸವನಪುರ ಮುಖ್ಯರಸ್ತೆಯಲ್ಲಿ ಮಧ್ಯರಾತ್ರಿ 12.45ರಲ್ಲಿ ಸತೀಶ್ ಎಂಬುವವರು ನಡೆದು ಹೋಗುತ್ತಿದ್ದಾಗ ಬೈಕ್ನಲ್ಲಿ ಬಂದ ದರೋಡೆಕೋರರು ಇವರನ್ನು ಅಡ್ಡಗಟ್ಟಿ ಹಣಕ್ಕಾಗಿ ಒತ್ತಾಯಿಸಿದ್ದಾರೆ. ಹಣ ನೀಡದಿದ್ದಾಗ ಚಾಕು ತೋರಿಸಿ ಬೆದರಿಸಿ ಅವರ ಬಳಿ ಇದ್ದ 28, 600 ರೂ. ಕಿತ್ತುಕೊಂಡು ಮುಂದೆ ಸಾಗಿದ್ದಾರೆ. ಸ್ವಲ್ಪ ದೂರದಲ್ಲಿ ನಡೆದು ಹೋಗುತ್ತಿದ್ದಾಗ ಅರವಿಂದ್ ಎಂಬುವವರನ್ನು ಅಡ್ಡಗಟ್ಟಿದ ಈ ದರೋಡೆಕೋರರು ಇವರಿಗೂ ಚಾಕು ತೋರಿಸಿ ಬೆದರಿಸಿ 25,400 ರೂ. ಕಿತ್ತುಕೊಂಡು ಪರಾರಿಯಾಗಿದ್ದಾರೆ.
ದರೋಡೆಗೊಳಗಾದ ಸತೀಶ್ ಮತ್ತು ಅರವಿಂದ್ ಎಂಬುವವರು ಕೆ.ಆರ್.ಪುರ ಠಾಣೆಗೆ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡಿರುವ ಪೊಲೀಸರು ದರೋಡೆಕೋರರ ಪತ್ತೆಗೆ ಬಲೆ ಬೀಸಿದ್ದಾರೆ.
Eesanje News 24/7 ನ್ಯೂಸ್ ಆ್ಯಪ್ – Click Here to Download