ಕೇಂದ್ರ ಸಚಿವರನ್ನು ಭೇಟಿಯಾಗಲು ನಾಳೆ ಸಿಎಂ ದೆಹಲಿಗೆ

ಈ ಸುದ್ದಿಯನ್ನು ಶೇರ್ ಮಾಡಿ

Kumaraswsamy-CM-01

ಬೆಂಗಳೂರು, ಅ.4- ರಾಜ್ಯದ ಅಭಿವೃದ್ಧಿಗೆ ಸಂಬಂಧಪಟ್ಟ ಪ್ರಸ್ತಾವನೆಗಳ ಬಗ್ಗೆ ಸಮಾಲೋಚನೆ ನಡೆಸಲು ಕೇಂದ್ರ ಸಚಿವರನ್ನು ಭೇಟಿಯಾಗಲು ನಾಳೆ ದೆಹಲಿಗೆ ತೆರಳುತ್ತಿರುವುದಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಬೆಂಗಳೂರು ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಕ್ಕೆ ಸಂಬಂಧಪಟ್ಟ ಪ್ರಸ್ತಾವನೆ ಬಗ್ಗೆ ಕೇಂದ್ರ ಸಚಿವರನ್ನು ಭೇಟಿಯಾಗುತ್ತಿರುವುದಾಗಿ ಹೇಳಿದರು.

ಅ.6ರಂದು ಹಿಂದೂಸ್ತಾನ್ ವಿಜ್ಞಾನ ಸಮ್ಮೇಳನದಲ್ಲಿ ಪಾಲ್ಗೊಳ್ಳುತ್ತಿದ್ದು, ಹೀಗಾಗಿ ಎರಡು ದಿನ ದೆಹಲಿ ಪ್ರವಾಸ ಕೈಗೊಂಡಿರುವುದಾಗಿ ಹೇಳಿದರು. ಥೈವಾನ್ ಕಂಪೆನಿ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಪಾಲ್ಗೊಳ್ಳಲು ಆಸಕ್ತಿ ತೋರಿದ್ದು, ಅದಕ್ಕೆ ಎಲ್ಲ ರೀತಿಯ ಸಹಕಾರವನ್ನು ರಾಜ್ಯ ಸರ್ಕಾರ ನೀಡಲು ಸಿದ್ಧವಿರುವುದಾಗಿ ತಿಳಿಸಿದರು.

Facebook Comments

Sri Raghav

Admin