ಕೇಜ್ರಿವಾಲ್ ಮನೆ ಮುಂದೆ ಬಿಜೆಪಿ ಪ್ರತಿಭಟನೆ, ಜಲಫಿರಂಗಿ ಪ್ರಯೋಗ

ಈ ಸುದ್ದಿಯನ್ನು ಶೇರ್ ಮಾಡಿ

BJP-Protest

ನವದೆಹಲಿ, ಮೇ 9- ಭ್ರಷ್ಟಾಚಾರದ ಸುಳಿಗೆ ಸಿಲುಕಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‍ಕೇಜ್ರಿವಾಲ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ಯುವ ಘಟಕದ ಕಾರ್ಯಕರ್ತರು ಇಂದು ನಡೆಸಿದ ಪ್ರತಿಭಟನೆ ವೇಳೆ ಘರ್ಷಣೆ ನಡೆದು ಪೊಲೀಸರು ಜಲಫಿರಂಗಿ ಪ್ರಯೋಗಿಸಿದ್ದಾರೆ.  ದೆಹಲಿಯ ಸಿವಿಲ್‍ಲೇನ್‍ನಲ್ಲಿರುವ ಅರವಿಂದ್‍ಕೇಜ್ರಿವಾಲ್ ಮನೆ ಮುಂದೆ ಇಂದು ಜಮಾಯಿಸಿದ ಬಿಜೆಪಿ ಯುವ ಕಾರ್ಯಕರ್ತರು ದೆಹಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬೇಕು ಹಾಗೂ ಭ್ರಷ್ಟಾಚಾರದ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ಸತ್ಯೇಂತ್ರಜೈನ್ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರು.ಈ ವೇಳೆ ಉದ್ರಿಗ್ತ ಗುಂಪೊಂದು ಪೊಲೀಸರು ಹಾಕಿದ್ದ ತಡೆಗೋಡೆಯನ್ನು ಭೇದಿಸಿ ಮುನ್ನುಗ್ಗಲು ಯತ್ನಿಸಿದಾಗ ಘರ್ಷಣೆ ನಡೆಯಿತು. ಈ ಸಂದರ್ಭದಲ್ಲಿ ಪೊಲೀಸರು ಜಲಫಿರಂಗಿ ಪ್ರಯೋಗಿಸಿ ಪ್ರತಿಭಟನಾಕಾರರನ್ನು ನಿಯಂತ್ರಿಸಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin