ಕೇರಳ ಸಿಎಂ ಪಿಣರಾಯಿ ವಿಜಯನ್ ಕೂಡಲೇ ರಾಜೀನಾಮೆ ನೀಡಬೇಕೆಂದು ಶೋಭಾ ಆಗ್ರಹ

ಈ ಸುದ್ದಿಯನ್ನು ಶೇರ್ ಮಾಡಿ

shobha

ಚಿಕ್ಕಮಗಳೂರು,ಮಾ.2- ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೂಡಲೇ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ನಾಗರಿಕ ಮಂಚ್ ಸಂಘಟನೆ ನೇತೃತ್ವದಲ್ಲಿ ಸಂಘ ಪರಿವಾರ ಮತ್ತು ಬಿಜೆಪಿ ಕಾರ್ಯಕರ್ತರು ನಗರದ ಅಜಾದ್‍ಪಾರ್ಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಮಾತನಾಡಿ, ಕೇರಳದಲ್ಲಿ ಆರ್‍ಎಸ್‍ಎಸ್ ಮತ್ತು ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ಅಮಾನುಷ ರೀತಿಯಲ್ಲಿ ಹಲ್ಲೆ ನಡೆಸಲಾಗುತ್ತಿದೆ ಎಂದು ಆರೋಪಿಸಿದರು. ಕಮ್ಯೂನಿಸ್ಟರ್ ಕೇರಳದಲ್ಲಿ ಅಧಿಕಾರಕ್ಕೆ ಬಂದಾಗಿನಿಂದಲೂ ಕೊಲೆಗಳ ನಡೆಯುತ್ತಿವೆ ಎಂದು ಆರೋಪಿಸಿದರು. ಮಂಗಳೂರಿನಲ್ಲಿ ನಡೆದ ಸೌಹಾರ್ದ ರ್ಯಾಲಿ ಕಾರ್ಯಕ್ರಮಕ್ಕೆ ಕೇರಳದ ಸಿಎಂ ಅವರು ಕೇರಳದಿಂದ ಗೂಂಡಾಗಳನ್ನು ಮಂಗಳೂರಿಗೆ ಕರೆತಂದು ಕಾರ್ಯಕ್ರಮ ಯಶಸ್ವಿಯಾಗುವಂತೆ ಮಾಡಿದರು.

ಕೇರಳದ ಗೂಂಡಗಳು ಕರ್ನಾಟಕಕ್ಕೆ ಬರುವುದು ಮಾಮೂಲಿಯಾಗಿದೆ. ಈ ಹಿಂದೆ ಮಡಿಕೇರಿಯಲ್ಲಿ ಟಿಪ್ಪು ಜಯಂತಿ ಸಂದರ್ಭದಲ್ಲಿ ನಡೆದ ಕೋಮುಗಲಭೆಯಲ್ಲಿ 2 ಸಾವಿರಕ್ಕೂ ಹೆಚ್ಚು ಗೂಂಡಾಗಳು ಬಂದಿದ್ದರು. ಸಂಘ ಪರಿವಾರದ ಕಾರ್ಯಕರ್ತರು ಕುಟ್ಟಪ್ಪ ಅವರನ್ನು ಹತ್ಯೆ ಮಾಡಲಾಗಿತ್ತು. ಕೇರಳದಲ್ಲಿ ಕೆಎಸ್‍ಡಿ ಹಾಗೂ ಪಾಪ್ಯೂಲರ್ ಫ್ರಂಟ್ ಆಫ್ ಇಂಡಿಯಾ ನಿರಂತರವಾಗಿ ಹತ್ಯೆಯಲ್ಲಿ ತೊಡಗಿವೆ. ಹಿಂದೂಗಳನ್ನು ಗುರಿಯಾಗಿಸಿಕೊಂಡು ಹತ್ಯೆ ಮಾಡಲಾಗುತ್ತಿದೆ. ಆದರೆ ಅವರ ಬಗ್ಗೆ ಸರ್ಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಆರ್‍ಎಸ್‍ಎಸ್ ನಗರ ಸಂಚಾಲಕ ಹಾಗೂ ಪತ್ರಕರ್ತ ಗಿರಿಜಾ ಶಂಕರ್, ಜಿಪಂ ಅಧ್ಯಕ್ಷೆ ಚೈತ್ರಶ್ರೀ, ನಗರಸಭೆ ಅಧ್ಯಕ್ಷೆ ಕವಿತಾ ಶೇಖರ್, ಬಿಜೆಪಿ ಮುಖಂಡರಾದ ಪ್ರೇಮ್‍ಕುಮಾರ್, ಎಚ್.ಡಿ.ತಮಯ್ಯ, ವಿಎಚ್‍ಪಿ ಮುಖಂಡ ಯೋಗೀಶ್‍ರಾಜ್ ಅರಸ್ ಮೊದಲಾವರು ಉಪಸ್ಥಿತರಿದ್ದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin