ಕೈಗೆಟುಕುವ ದರದಲ್ಲಿ ಸರ್ವರಿಗೂ ಆರೋಗ್ಯ ಸೇವೆ : ಮೋದಿ

ಈ ಸುದ್ದಿಯನ್ನು ಶೇರ್ ಮಾಡಿ

Tata-Memorial

ಮುಂಬೈ, ಮೇ 25– ಸರ್ವರಿಗೂ ಕೈಗೆಟುಕುವ ದರದಲ್ಲಿ ಚಿಕಿತ್ಸೆ ದೊರೆಯುವಂತಾಗಲು ವೈದ್ಯಕೀಯ ಉಪಕರಣಗಳಿಗಾಗಿ ಹೊರ ದೇಶಗಳ ಮೇಲೆ ಅವಲಂಬನೆಯನ್ನು ತಪ್ಪಿಸುವ ಅಗತ್ಯವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.   ಸಮಾಜ ಸೇವೆಯಲ್ಲಿ ಟಾಟಾ ಮೆಮೋರಿಯಲ್ ಸೆಂಟರ್‍ನ 75 ವರ್ಷಗಳ ಸೇವೆಯನ್ನು ಸಾರುವ ಪುಸ್ತಕವನ್ನು ದೆಹಲಿಯಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಬಿಡುಗಡೆ ಮಾಡಿ ಮೋದಿ ಮಾತನಾಡಿದರು.ನಮ್ಮ ದೇಶದಲ್ಲಿ ಬಳಸಲಾಗು ತ್ತಿರುವ ವೈದ್ಯಕೀಯ ಉಪಕರಣಗಳಲ್ಲಿ ಶೇ.70ರಷ್ಟು ವಿದೇಶಿಗಳಿಂದ ಆಮದಾಗಿವೆ.


ಇದರಿಂದಾಗಿ ಚಿಕಿತ್ಸೆ ತುಂಬ ದುಬಾರಿಯಾಗುತ್ತಿದೆ. ಈ ಪರಿಸ್ಥಿತಿ ಬದಲಾಗಬೇಕಾದ ಅಗತ್ಯವಿದೆ ಎಂದು ಹೇಳಿದರು. ರಾಷ್ಟ್ರೀಯ ಆರೋಗ್ಯ ನೀತಿಯನ್ನು ಅನುಷ್ಠಾನಗೊಳಿಸಿ ದ್ದೇವೆ. ಇದರೊಂದಿಗೆ ಸರ್ವರಿಗೂ ಕೈಗೆಟುಕುವ ದರದಲ್ಲಿ ಆರೋಗ್ಯ ಸೇವೆಗಳನ್ನು ಒದಗಿಸುವುದು ನಮ್ಮ ಹೆಗ್ಗುರಿಯಾಗಿದೆ ಎಂದು ಮೋದಿ ಹೇಳಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin