ಕೈ-ಕಮಲ ಕಾರ್ಯಕರ್ತರ ನಡುವೆ ಗಲಾಟೆ, ಕಾಶಪ್ಪನವರ ಕಾರು ಜಖಂ

ಈ ಸುದ್ದಿಯನ್ನು ಶೇರ್ ಮಾಡಿ

Car--01

ಬಾಗಲಕೋಟೆ. ಸೆ.06 ಪಿಕೆಪಿಎಸ್ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾಚಣೆ ಹಿನ್ನೆಲೆಯಲ್ಲಿ ಸ್ಥಳೀಯ ಬಿಜೆಪಿ ಮತ್ತು ಕಾಂಗ್ರೆಸ್ ಬೆಂಬಲಿಗರ ನಡುವೆ ಗಲಾಟೆ ನಡೆದ ಘಟನೆ ಹುನಗುಂದದಲ್ಲಿ ನಡೆದಿದೆ. ಪಿಕೆಪಿಎಸ್ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಗಾದಿಗಾಗಿ ಸ್ಥಳೀಯ ಕಾಂಗ್ರೆಸ್ ನಾಯಕರು ತಮ್ಮ ಬೆಂಬಲಿತ ವ್ಯಕ್ತಿಯನ್ನು ಅವಿರೋಧ ಆಯ್ಕೆ ಮಾಡಲು ಕಸರತ್ತು ನಡೆಸಿದ್ದರು. ಹಾಗಾಗಿ ಈ ಬಗ್ಗೆ ಕೈ-ಕಮಲ ಬೆಂಬಲಿಗರ ನಡುವೆ ಜಗಳ ನಡೆದಿದೆ ಎನ್ನಲಾಗುತ್ತಿದೆ. ಪರಿಸ್ಥಿತಿ ವಿಕೋಪಕ್ಕೆ ತಿರುಗಿದ್ದು ಕೆಲ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ್ದಾರೆ ಎನ್ನಲಾಗುತ್ತಿದೆ. ಘಟನೆಯಲ್ಲಿ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ವಾಹನ ಹಾಗೂ ಎರಡು ಪೊಲೀಸ್ ವಾಹನ ಜಖಂಗೊಂಡಿವೆ.

ಪರಿಸ್ಥಿತಿ ಉದ್ವಿಗ್ನಗೊಂಡಿದ್ದು ಗುಂಪು ಚದುರಿಸಲು ಪೊಲೀಸರು ಬೆತ್ತದ ರುಚಿ ತೋರಿಸಿದ್ದಾರೆ. ಸದ್ಯ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು ಭದ್ರತೆಗಾಗಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ. ಘಟನೆಯಲ್ಲಿ ಆರು ಜನ ಕಾರ್ಯಕರ್ತರು ಗಾಯಗೊಂಡಿದ್ದು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನು ಗಲಾಟೆ ವೇಳೆ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ಮೇಲೂ ಹಲ್ಲೆಗೆ ಯತ್ನ ನಡೆದಿದೆ ಎನ್ನಲಾಗುತ್ತಿದೆ.

Facebook Comments

Sri Raghav

Admin