ಕೊನೆಗೂ ಎಚ್ಚೆತ್ತ ರಾಜ್ಯ ಸರ್ಕಾರ : ಕನ್ನಡದಲ್ಲಿ ‘ನೀಟ್’ ಪರೀಕ್ಷೆ

ಈ ಸುದ್ದಿಯನ್ನು ಶೇರ್ ಮಾಡಿ

NEEt-Exam-01

ನವದೆಹಲಿ, ಡಿ.23-ವೈದ್ಯಕೀಯ ಕಾಲೇಜುಗಳ ಪ್ರವೇಶಕ್ಕೆ ನೀಟ್ ಪರೀಕ್ಷೆಯನ್ನು ಕನ್ನಡದಲ್ಲೇ ನಡೆಸಬೇಕೆಂಬ ಬಗ್ಗೆ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿರುವುದು ಸ್ವಾಗತಾರ್ಹ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಅನಂತಕುಮಾರ್ ಹೇಳಿದ್ದಾರೆ. ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು. ಕೊನೆಗೂ ರಾಜ್ಯ ಸರ್ಕಾರ ಈ ವಿಷಯದಲ್ಲಿ ಎಚ್ಚೆತ್ತುಕೊಂಡಿದೆ ಎಂದು ಹೇಳಿರುವ ಅವರು ನೀಟ್ ಪರೀಕ್ಷೆಗೆ ಕನ್ನಡ ಭಾಷೆಯನ್ನು ಪರಿಗಣಿಸಲು ಸಾಧ್ಯವಾಗದಿರುವುದಕ್ಕೆ ಅವರು ಕಾರಣಗಳನ್ನು ನೀಡಿದರು.

ಮೆಡಿಕಲ್ ಕಾಲೇಜುಗಳ ಪ್ರವೇಶಕ್ಕೆ ನೀಟ್ ಪರೀಕ್ಷೆಗಳನ್ನು ಕನ್ನಡದಲ್ಲಿ ನಡೆಸುವ ಬಗ್ಗೆ ರಾಜ್ಯ ಸರ್ಕಾರದಿಂದ ಪ್ರಸ್ತಾವನೆ ಬಂದಿರಲಿಲ್ಲ. ಕಳೆದ ತಿಂಗಳು ನ.25ರಂದು ಇಂಗ್ಲಿಷ್‍ನಲ್ಲಿ ನೀಟ್ ಪರೀಕ್ಷೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಹಾಗಾಗಿ ಕೇಂದ್ರ ಸರ್ಕಾರವು ಕನ್ನಡದಲ್ಲಿ ಪರೀಕ್ಷೆ ನಡೆಸಲು ಪರಿಗಣಿಸಲಿಲ್ಲ ಎಂದು ಅವರು ಹೇಳಿದರು. ಕಳೆದ ಮೂರು ದಿನಗಳ ಹಿಂದೆ ರಾಜ್ಯ ಸರ್ಕಾರ ಇನ್ನೊಂದು ಪತ್ರ ಬಂದಿತು. ನೀಟ್ ಪರೀಕ್ಷೆಯನ್ನು ಕನ್ನಡದಲ್ಲಿ ನಡೆಸುವ ಬಗ್ಗೆ ಕೋರಲಾಗಿತ್ತು. ಈ ಸಂಬಂಧ ಕೇಂದ್ರ ಆರೋಗ್ಯ ಸಚಿವಾಲಯದೊಂದಿಗೆ ಮಾತುಕತೆ ನಡೆಸಲಾಗುವುದು ಎಂದು ಅವರು ಹೇಳಿದರು.  ಕನ್ನಡದಲ್ಲಿ ನೀಟ್ ಪರೀಕ್ಷೆ ನಡೆಸಲು ಸಾಕಷ್ಟು ತಯಾರಿಗಳನ್ನೂ ನಡೆಸಬೇಕು ಎಂದು ಅವರು ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದರು.

Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin