ಕೊನೆ ಗಳಿಗೆಯಲ್ಲಿ ನನಗೆ ಟಿಕೆಟ್ ಸಿಗುವುದು ನಿಶ್ಚಿತ : ಬಿ.ಬಿ.ಚಿಮ್ಮನಕಟ್ಟಿ

ಈ ಸುದ್ದಿಯನ್ನು ಶೇರ್ ಮಾಡಿ

Chimmanakatti--01

ಬಾದಾಮಿ, ಏ.16- ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದೇನೆ. ನನಗೆ ಟಿಕೆಟ್ ಸಿಗುವುದು ನಿಶ್ಚಿತ ಎಂದು ಶಾಸಕ ಬಿ.ಬಿ.ಚಿಮ್ಮನಕಟ್ಟಿ ತಿಳಿಸಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡಿದ ಅವರು, ಪಟ್ಟಿಯಲ್ಲಿ ನನ್ನ ಹೆಸರು ಇಲ್ಲದಿರಬಹುದು. ಆದರೆ, ಕೊನೆ ಗಳಿಗೆಯಲ್ಲಿ ನನಗೆ ಟಿಕೆಟ್ ಸಿಗುತ್ತದೆ. ಬಿ ಫಾರಂ ಕೊಡುವುದಾಗಿ ಮುಖ್ಯಮಂತ್ರಿಗಳು ತಮಗೆ ಆಶ್ವಾಸನೆ ನೀಡಿದ್ದಾರೆ ಎಂದರು.  2013ರ ಚುನಾವಣೆಯಲ್ಲಿ ನನಗೆ ಕೊನೆ ಗಳಿಗೆಯಲ್ಲಿ ಬಿ ಫಾರಂ ನೀಡಲಾಗಿತ್ತು ಎಂದು ಅವರು ಹೇಳಿದರು. ಸಿಎಂ ಸ್ಪರ್ಧಿಸಿದರೆ ಮಾತ್ರ ಕ್ಷೇತ್ರ ಬಿಟ್ಟುಕೊಡುತ್ತೇನೆ. ಬೇರೆ ಯಾರಿಗೂ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲವೆಂದು ಅವರು ತಿಳಿಸಿದರು. ಚಿಮ್ಮನಕಟ್ಟಿ ಅವರಿಗೆ ಟಿಕೆಟ್ ನೀಡಲೇಬೇಕು ಎಂದು ಅಭಿಮಾನಿಗಳು ನಿನ್ನೆ ಬಾಗಲಕೋಟೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಎಸ್.ಆರ್.ಪಾಟೀಲ್ ಅವರ ಮನೆ ಮುಂದೆ ಪ್ರತಿಭಟನೆ ನಡೆಸಿ ಟಿಕೆಟ್‍ಗೆ ಒತ್ತಾಯಿಸುತ್ತಿದ್ದುದನ್ನು ಸ್ಮರಿಸಬಹುದು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin