ಕೋಕರಾಝರ್ ಉಗ್ರರ ದಾಳಿ ವೇಳೆ ಕೋಲಾರದ ಯೋಧ ಹುತಾತ್ಮ

ಈ ಸುದ್ದಿಯನ್ನು ಶೇರ್ ಮಾಡಿ

shdfshadhdh

ಅಸ್ಸಾಂ,ಆ.6-ಕೋಕರಾಝರ್ ಮಾರುಕಟ್ಟೆ ಪ್ರದೇಶಕ್ಕೆ ನಿನ್ನೆ ಮಧ್ಯಾಹ್ನ  ಉಗ್ರರು ದಾಳಿ ನಡೆಸಿದ ಸಂದರ್ಭದಲ್ಲಿ ಕಾರ್ಯಾಚರಣೆಗಿಳಿದ ಸೇನಾಪಡೆಯ ಯೋಧರಲ್ಲಿ ಕರ್ನಾಟಕದ ಕೋಲಾರ ಜಿಲ್ಲೆಯ ಯೋಧನೊಬ್ಬ ವೀರ ಮರಣವನ್ನಪ್ಪಿದ್ದಾನೆ.  ಗಡಿ ಭದ್ರತಾ ಪಡೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಕೋಲಾರ ತಾಲ್ಲೂಕಿನ ಕಿತ್ತಂಡೂರಿನವರಾದ ರಾಜೇಶ್(23) ಹುತಾತ್ಮರಾಗಿದ್ದಾರೆ.  ಕಳೆದ ಮೂರು ವರ್ಷಗಳ ಹಿಂದಷ್ಟೇ ಸೇನೆಗೆ ಸೇರ್ಪಡೆಯಾಗಿದ್ದರು.  ಅಸ್ಸಾಂನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಅವರಿಗೆ ನಿನ್ನೆ ಮಧ್ಯಾಹ್ನ ಉಗ್ರರ ದಾಳಿ ಬಗ್ಗೆ ಮಾಹಿತಿ ಬಂದು ತಂಡದೊಂದಿಗೆ ಕಾರ್ಯಾಚರಣೆಗಿಳಿದಾಗ, ಗುಂಡಿನ ಚಕಮಕಿ ನಡೆದಿತ್ತು.  ಉಗ್ರರ ಕಡೆ ವೀರಾವೇಶವಾಗಿ ನುಗ್ಗಿ ಸದೆಬಡೆಯಲು ಮುಂದಾದಾಗ ಸ್ಫೋಟದಲ್ಲಿ ರಾಜೇಶ್ ತೀವ್ರವಾಗಿ ಗಾಯಗೊಂಡರು.

ನಂತರ ಅವರನ್ನು ಆಸ್ಪತ್ರೆಗೆ ದಾಖಲಿಸಲು ಮುಂದಾದರೂ ಅಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದರು ಎಂದು ಸೇನಾ ಮೂಲಗಳು ತಿಳಿಸಿವೆ.   ಇಂದು ಸಂಜೆ ಸ್ವಗ್ರಾಮಕ್ಕೆ ಪಾರ್ಥೀವ ಶರೀರ ಆಗಮಿಸಲಿದೆ ಎಂದು ಮೂಲಗಳು ತಿಳಿಸಿದ್ದು , ಉಗ್ರರ ಕಾರ್ಯಾಚರಣೆ ವೇಳೆ ಮತ್ತೊಬ್ಬ ಕನ್ನಡಿಗ ವೀರ ಯೋಧ ದೇಶಕ್ಕಾಗಿ ಪ್ರಾಣ ತೆತ್ತಿದ್ದಾರೆ.   ಮೃತ ಯೋಧರ ನಿವಾಸಕ್ಕೆ ಜನಪ್ರತಿನಿಧಿಗಳು ಸ್ಥಳೀಯ ಮುಖಂಡರು, ಗ್ರಾಮಸ್ಥರು ದೌಡಾಯಿಸಿ ಕುಟುಂಬ ಸದಸ್ಯರಿಗೆ ಸಾಂತ್ವಾನ ಹೇಳಿದ್ದಾರೆ.

Facebook Comments

Sri Raghav

Admin