ಕೋಮುಗಲಭೆಗೆ ಸಂಬಂಧಿಸಿದ ಕೇಂದ್ರ ಸಚಿವರ ಪುತ್ರ ಅರೆಸ್ಟ್

ಈ ಸುದ್ದಿಯನ್ನು ಶೇರ್ ಮಾಡಿ

Arijit

ಪಾಟ್ನಾ, ಏ.1-ಬಿಹಾರದ ಭಾಗಲ್ಪುರದಲ್ಲಿ ಇತ್ತೀಚೆಗೆ ನಡೆದ ಕೋಮು ಗಲಭೆಗಳಿಗೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ಕೇಂದ್ರ ಸಚಿವ ಅಶ್ವಿನ್ ಕುಮಾರ್ ಚೌಬೇ ಅವರ ಪುತ್ರ ಅರಿಜಿತ್ ಶಾಶ್ವತ್‍ನನ್ನು ಇಂದು ಮುಂ ಜಾನೆ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಶಾಶ್ವತ್‍ಗೆ ಭಾಗಲ್ಪುರ ನ್ಯಾಯಾಲಯವೊಂದು ನಿರೀಕ್ಷಣಾ ಜಾಮೀನು ತಿರಸ್ಕರಿಸಿದ ಕೆಲವು ಗಂಟೆಗಳ ನಂತರ ಆತನನ್ನು ಬಂಧಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಂಪುಟದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ರಾಜ್ಯ ಸಚಿವರಾಗಿರುವ ಅಶ್ವಿನಿ ಕುಮಾರ್ ಚೌಬೇ ಅವರ ಪುತ್ರ ಅರಿಜಿತ್ ಶಾಶ್ವತ್ ಪಾಟ್ನಾ ಸಮೀಪದ ಪ್ರಸಿದ್ಧ ಹನುಮಾನ್ ದೇವಸ್ಥಾನದಲ್ಲಿದ್ದಾನೆ ಎಂಬ ಮಾಹಿತಿ ತಿಳಿದು ಪೊಲೀಸರು ಆತನನ್ನು ಬಂಧಿಸಿದರು. ಈತನ ವಿರುದ್ಧ ಮಾ.24ರಂದು ಪೊಲೀಸರು ಬಂಧನ ವಾರೆಂಟ್ ಜಾರಿಗೊಳಿಸಿದ್ದರು. ಇದರಿಂದ ಪಾರಾಗಲು ಆತ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದ.

Facebook Comments

Sri Raghav

Admin