ಕೋವಿಡ್ ಸೋಂಕಿತರ ಆರೋಗ್ಯ ಪರಿಶೀಲನೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಮೇ 5- ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ವಿಜಯಪುರ ನಗರದಲ್ಲಿ ಹೋಂ ಐಸೋಲೇಶನ್ ನಲ್ಲಿರುವ, ಕೋವಿಡ್ ಸೋಂಕಿತ ವ್ಯಕ್ತಿಗಳ ಆರೋಗ್ಯ ಸ್ಥಿತಿಯನ್ನು ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿ ಪರಿಶೀಲಿಸಿದರು.

ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಧರ್ಮೇಂದ್ರ ಒಳಗೊಂಡ ವೈದ್ಯಕೀಯ ಸಿಬ್ಬಂದಿಗಳು, ಕೋವಿಡ್ ಸೋಂಕಿತರ ಆರೋಗ್ಯ ಸ್ಥಿತಿಗತಿಗಳನ್ನು ಪರಿಶೀಲಿಸಿ ಆರೋಗ್ಯ ಶಿಕ್ಷಣದ ಜೊತೆಯಲ್ಲಿ ಮಾಸ್ಕ್ ಧರಿಸುವುದು, ನಿರಂತರ ಕೈ ತೊಳೆಯುವುದು ಸೇರಿದಂತೆ ಮನೆಯವರ ಜೊತೆ ಬೆರೆಯದೆ, ಪ್ರತ್ಯೇಕ ಕೊಠಡಿಯಲ್ಲಿ ಕಡ್ಡಾಯವಾಗಿ ವಾಸವಿರುವ ಬಗ್ಗೆ ಜಾಗೃತಿ ಮೂಡಿಸಿದರು.

ಕೋವಿಡ್ ಸೋಂಕಿತರು, ನಿಯಮಾವಳಿ ಪ್ರಕಾರ ಚಿಕಿತ್ಸೆಯನ್ನು ಪಡೆಯುವುದರ ಜೊತೆಯಲ್ಲಿ ಹಣ್ಣು, ತರಕಾರಿ, ಮೊಟ್ಟೆ, ಹಾಲು ಸೇರಿದಂತೆ ಇತರೆ ಪೌಷ್ಟಿಕಾಂಶವಿರುವ ಆಹಾರ ಸೇವನೆ ಮಾಡಬೇಕು.
ನೀರಿನಲ್ಲಿ ಅರಿಸಿಣ, ಕಾಳುಮೆಣಸು ಮತ್ತು ಜೀರಿಗೆ ಬೆರೆಸಿ ಕುದಿಸಿ ಮಾಡುವ ಕಷಾಯವನ್ನು ನಿರಂತರವಾಗಿ ಸೇವನೆ ಮಾಡುವ ಕುರಿತು ತಿಳುವಳಿಕೆ ನೀಡಲಾಯಿತು.

ಹೆಚ್ಚಿನ ರಕ್ತದೊತ್ತಡ ಹಾಗೂ ಸಕ್ಕರೆ ಕಾಯಿಲೆಯಿಂದ ಬಳಲುತ್ತಿರುವ ಕೋವಿಡ್ ಸೋಂಕಿನ ವ್ಯಕ್ತಿಗಳು ಬಹಳ ಎಚ್ಚರದಿಂದ ಚಿಕಿತ್ಸೆ ಪಡೆಯಬೇಕು. ಕೋವಿಡ್ ಸೋಂಕಿನ ಲಕ್ಷಣಗಳು ಕಂಡುಬಂದಲ್ಲಿ ಹಾಗೂ ಉಸಿರಾಟದಲ್ಲಿ ತೊಂದರೆ ಉಂಟಾದಲ್ಲಿ ಹತ್ತಿರದ ಅರೋಗ್ಯ ಸಿಬ್ಬಂದಿಗಳನ್ನು ಸಂಪರ್ಕಿಸಲು ಸೂಚಿಸಿದರು. ಪ್ರತಿಯೊಬ್ಬರು ಆರೋಗ್ಯ ಬಗ್ಗೆ ಜಾಗೃತಿ ವಹಿಸಲು ವೈದ್ಯಕೀಯ ಸಿಬ್ಬಂದಿಗಳು ತಿಳಿಸಿದರು.

Facebook Comments

Sri Raghav

Admin