ಕ್ಯಾಲಿಫೋರ್ನಿಯಾದಲ್ಲಿ ಕಾಡ್ಗಿಚ್ಚಿನ ರೌದ್ರಾವತಾರ, ಅಗ್ನಿಶಮನಕ್ಕೆ ಹರಸಾಹಸ

ಈ ಸುದ್ದಿಯನ್ನು ಶೇರ್ ಮಾಡಿ

Fire--01

ಲಾಸ್ ಏಂಜೆಲ್ಸ್, ಜು.16-ಅಮೆರಿಕದ ಕ್ಯಾಲಿಫೋರ್ನಿಯಾ ಸಹಿತ ಅನೇಕ ಸ್ಥಳಗಳಲ್ಲಿ ಚಾಚಿಕೊಂಡಿರುವ ವಿನಾಶಕಾರಿ ಕಾಡ್ಗಿಚ್ಚಿನ ರೌದ್ರಾವತಾರ ಮುಂದುವರಿದಿದ್ದು, ಬೆಂಕಿಯ ಕೆನ್ನಾಲಗೆಯನ್ನು ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಶ್ರಮಿಸುತ್ತಿದ್ದಾರೆ. ಇನ್ನೊಂದೊಡೆ ಭಯಭೀತರಾದ ಸಾವಿರಾರು ಮಂದಿ ಸುರಕ್ಷಿತ ಸ್ಥಳಗಳಿಗೆ ಪಲಾಯವಾಗಿದ್ದಾರೆ. ಅಧಿಕ ತಾಪಮಾನ ಮತ್ತು ಗಾಳಿಯಿಂದಾಗಿ ಜು.10ರಂದು ಕಾಣಿಸಿಕೊಂಡ ಬೆಂಕಿ ವ್ಯಾಪಕವಾಗಿ ಹಬ್ಬುತ್ತಿದ್ದು, ಕ್ಯಾಲಿಫೋರ್ನಿಯಾದ ಸಾಂತಾ ಬಾರ್ಬಾರದಲ್ಲಿ ಮತ್ತಷ್ಟು ಪ್ರಕೋಪಕ್ಕೆ ತಿರುಗಿದೆ. ಬ್ರಿಟಿಷ್ ಕೊಲಂಬಿಯಾದ ಕೆನಡಾ ಪ್ರಾಂತ್ಯದಲ್ಲಿ ಬೆಂಕಿ ರುದ್ರನರ್ತನ ಮಾಡುತ್ತಿದೆ. ಕ್ಯಾಲಿಫೋರ್ನಿಯಾ ಸ್ಯಾನ್ ಲೂಯಿಸ್ ಓಬಿಸ್ಪೊ ಕೌಂಟಿಯಲ್ಲಿ ಕಾಡ್ಗಿಚ್ಚಿನ ಪ್ರಕೋಪ ಭೀಕರವಾಗಿದ್ದು, 117 ಕಿ.ಮೀ. ವ್ಯಾಪ್ತಿಯ ಪ್ರದೇಶದ ಬೆಂಕಿಗಾಹುತಿಯಾಗಿದೆ ಎಂದು ಅಗ್ನಿಶಾಮಕ ಇಲಖೆ ಅಧಿಕಾರಿಗಳು ತಿಳಿಸಿದ್ದಾರೆ.

ಕ್ಯಾಲಿಫೋರ್ನಿಯಾದಲ್ಲಿ 8,000ಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಗಳಿಗೆ ರವಾನಿಸಲಾಗಿದೆ. ಬ್ರಿಟಿಷ್ ಕೊಲಂಬಿಯಾದಲ್ಲಿ ಸುಮಾರು 10,000 ಜನರು ಅಗ್ನಿಯ ರುದ್ರತಾಂಡವಕ್ಕೆ ಹೆದರಿ ದೂರ ಹೋಗಿದ್ದಾರೆ. ಅರಣ್ಯ ಪ್ರದೇಶವನ್ನು ಆಪೋಶನ ತೆಗೆದುಕೊಳ್ಳುತ್ತಾ ಮುನ್ನುಗ್ಗುತ್ತಿರುವ ಬೆಂಕಿಯನ್ನು ತಹಬಂದಿಗೆ ತರಲು 1,200ಕ್ಕೂ ಹೆಚ್ಚು ಸಿಬ್ಬಂದಿ ಹಗಲು-ರಾತ್ರಿ ಶ್ರಮಿಸುತ್ತಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin