ಕ್ರಿಕೆಟ್ ಬೆಟ್ಟಿಂಗ್ : ಇಬ್ಬರ ಬಂಧನ

ಈ ಸುದ್ದಿಯನ್ನು ಶೇರ್ ಮಾಡಿ

ಮೈಸೂರು.ಏ.6-ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಇಬ್ಬರನ್ನು ನಗರದ ಸಿಸಿಬಿ ಹಾಗು ವಿಜಯನಗರ ಠಾಣೆ ಪೊಲೀಸರು ಬಂಧಿಸಿದ್ದು, 10.490 ರೂ ನಗದು, 10 ಮೊಬೈಲ್ ಫೋನ್ , 1 ಟಿವಿ, ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

ಹೂಣಸೂರು ತಾಲೂಕಿನ ಬಿಳಿಕೆರೆ ಹೋಬಳಿಯ ದಾಸ್ತಿಕೊಪ್ಪ ಗ್ರಾಮದ ಶಬರೀಶ್(22) ಮತ್ತು ಪ್ರಕಾಶ್(20) ಬಂಧಿತ ಆರೋಪಿಗಳು.ನಗರದ ಹೂಟಗಳ್ಳಿಯ ಮನೆಯೊಂದರಲ್ಲಿ ಆರೋಪಿಗಳು ಕ್ರಿಕೆಟ್ ಬೆಟ್ಟಿಂಗ್ ಧಂಧೆ ನಡೆಸುತ್ತಿದ್ದರು. ಈ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಖಚಿತ ಮಾಹಿತಿ ಆಧರಿಸಿ ಸಿಸಿಬಿ ಇನ್ಸ್‍ಪೆಕ್ಟರ್ ರಾಜು, ವಿಜಯನಗರ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin