ಕ್ರಿಕೆಟ್ ಬೆಟ್ಟಿಂಗ್ ಅಡ್ಡೆ ಮೇಲೆ ಸಿಸಿಬಿ ದಾಳಿ : ಮೂವರ ಬಂಧನ
ಈ ಸುದ್ದಿಯನ್ನು ಶೇರ್ ಮಾಡಿ
ಮೈಸೂರು, ಮೇ 16- ಹಣವನ್ನು ಪಣವಾಗಿ ಕಟ್ಟಿಕೊಂಡು ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಅಡ್ಡೆ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ ಮೂವರನ್ನು ಬಂಧಿಸಿದ್ದಾರೆ.ರಾಮಕೃಷ್ಣನಗರದ ಏರ್ಕಟ್ಟಿಂಗ್ವೊಂದರ ಮಾಲೀಕ ಶೇಖರ್ (28), ಮಂಡ್ಯ ಜಿಲ್ಲೆಯ ಅರಕೆರೆಯ ಅಜಿತ್ (22) ಹಾಗೂ ಕೆಆರ್ ಪೇಟೆ ತಾಲೂಕಿನ ಸಂಪತ್ (26) ಬಂಧಿತರು.ಆರೋಪಿಗಳಿಂದ 8200ರೂ. ನಗದು, ಲ್ಯಾಪ್ಟಾಪ್, ಟಿವಿ, 5 ಮೊಬೈಲ್ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.ಖಚಿತ ಮಾಹಿತಿ ಮೇರೆಗೆ ಕುವೆಂಪುನಗರ ಪೊಲೀಸರ ನೆರವಿನೊಂದಿಗೆ ಸಿಸಿಬಿ ಪೊಲೀಸರು ದಾಳಿ ಮಾಡಿ ಮೂವರನ್ನು ಬಂಧಿಸಿದ್ದಾರೆ.
< Eesanje News 24/7 ನ್ಯೂಸ್ ಆ್ಯಪ್ >
Click Here to Download : Android / iOS
Facebook Comments