ಕ್ರಿಮಿನಾಶಕ ಸೇವಿಸಿ ವ್ಯಕ್ತಿ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

ಚನ್ನಪಟ್ಟಣ, ಅ.19- ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಅಬ್ಬೂರು ದೊಡ್ಡಿ ನಿವಾಸಿ ಸುನೀಲ್‍ಕುಮಾರ್ (28) ಆತ್ಮಹತ್ಯೆಗೆ ಶರಣಾದವ.ಗ್ರಾಮದ ಸಿದ್ದರಾಮಯ್ಯರ ಮಗ ಸುನೀಲ್‍ಕುಮಾರ್ ತಮ್ಮ ತೋಟದಲ್ಲಿ ಟೊಮೊಟೋ ಬೆಳೆಗೆ ಸಿಂಪಡಿಸುವ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆವರ್ಷದ ಹಿಂದೆ ವಿವಾಹವಾಗಿದ್ದ ಸುನೀಲ್‍ಕುಮಾರ್‍ಗೆ ಒಂದು ಹೆಣ್ಣುಮಗು ಇದ್ದು, ಟೊಯೋಟೋ ಕಾರ್ಖಾನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸುನೀಲ್‍ಕುಮಾರ್ ಕೆಲ ದಿನಗಳ ಹಿಂದೆ ಕೆಲಸ ಬಿಟ್ಟು ತಾಯಿ, ಪತ್ನಿ ಜೊತೆ ಇದ್ದು, ತೋಟದಲ್ಲ ವ್ಯವಸಾಯ ಮಾಡಿಕೊಂಡಿದ್ದ ಎಂದು ಹೇಳಲಾಗಿದೆ.ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ದೇಹವನ್ನು ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಒಪ್ಪಿಸಲಾಗಿದೆ.

 

► Follow us on –  Facebook / Twitter  / Google+

Facebook Comments

Sri Raghav

Admin