ಕ್ಷುಲ್ಲಕ ಕಾರಣಕ್ಕೆ ಪತ್ನಿಯೊಂದಿಗೆ ಜಗಳವಾಡಿ ಚಿಲಿಸುತ್ತಿದ್ದ ಬಸ್ ನಿಂದ ಜಿಗಿದ ಪತಿ

ಈ ಸುದ್ದಿಯನ್ನು ಶೇರ್ ಮಾಡಿ

bus

ರಾಯಚೂರು, ಆ.15-ಕೆಎಸ್‍ಆರ್‍ಟಿಸಿ ಬಸ್ಸಿನಲ್ಲಿ ದಂಪತಿ ನಡುವೆ ನಡೆದ ಜಗಳ ವಿಕೋಪಕ್ಕೆ ತಿರುಗಿ   ಕೋಪಗೊಂಡ ಪತಿ ಬಸ್ ಕಿಟಕಿಯಿಂದ ಹಾರಿದ ಪರಿಣಾಮ ಗಂಭೀರ ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ. ಕಲಬುರಗಿಯಿಂದ ಹಗರಿಬೊಮ್ಮನಹಳ್ಳಿಗೆ ಕೆಸ್‍ಆರ್‍ಟಿಸಿ ಬಸ್ಸಿನಲ್ಲಿ ಬರುತ್ತಿದ್ದ ದಂಪತಿಗಳ ನಡುವೆ ಯಾವುದೋ ವಿಷಯಕ್ಕೆ ಜಗಳ ನಡೆದಿದೆ. ಈ ವೇಳೆ ಕುಪಿತನಾದ ಆಕೆಯ ಗಂಡ ಲಿಂಗನಸೂರು ಅಂಕುಶದೊಡ್ಡಿ ಬಳಿ ಬಸ್‍ನ ಕಿಟಕಿಯಿಂದ ಜಿಗಿದಿದ್ದಾನೆ. ಇದರಿಂದಾಗಿ ಆತ ಗಂಭೀರವಾಗಿ ಗಾಯಗೊಂಡಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಮಸ್ಕಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

► Follow us on –  Facebook / Twitter  / Google+

Facebook Comments

Sri Raghav

Admin