ಖರ್ಗೆ ರಾಜ್ಯ ರಾಜಕಾರಣಕ್ಕೆ ಬರುವ ಮಾಹಿತಿ ಇಲ್ಲ : ಪರಮೇಶ್ವರ್

ಈ ಸುದ್ದಿಯನ್ನು ಶೇರ್ ಮಾಡಿ

parameshwar

ಬೆಂಗಳೂರು,ಮೇ 10- ಲೋಕ ಸಭಾ ಸದಸ್ಯ, ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ರಾಜ್ಯ ರಾಜಕಾರಣಕ್ಕೆ ಮರಳಿದ್ದು, ರಾಜ್ಯ ಕಾಂಗ್ರೆಸ್‍ನ ಅಧ್ಯಕ್ಷರಾಗಲಿ ದ್ದಾರೆ ಎಂಬ ಸುದ್ದಿಗೆ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಸಿಡಿಮಿಡಿ ಗೊಂಡಿದ್ದಾರೆ.   ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧಿಕೃತ ನಿವಾಸ ಕಾವೇರಿ ಬಳಿ ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ಎಲ್ಲವನ್ನು ನೀವೇ ಹೇಳುತ್ತೀರಾ, ಒಂದೆಡೆ ಪರಮೇಶ್ವರ್ ಅಧ್ಯಕ್ಷರಾಗಿ ಮುಂದುವರೆಯುತ್ತಾರೆ, ಇನ್ನೊಂದೆಡೆ ಮಲ್ಲಿಕಾರ್ಜುನ ಖರ್ಗೆ ರಾಜ್ಯ ರಾಜಕಾರಣಕ್ಕೆ ಬರುತ್ತಾರೆ ಎಂದು ನೀವೇ ಸುದ್ದಿಯನ್ನು ಬಿತ್ತರಿಸುತ್ತೀರಾ ಇದರಲ್ಲಿ ನಾನು ಹೇಳುವುದೇನಿದೆ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.ಮಲ್ಲಿಕಾರ್ಜುನ ಖರ್ಗೆ ರಾಜ್ಯ ರಾಜಕಾರಣಕ್ಕೆ ಬರುವ ಬಗ್ಗೆಯಾಗಲಿ ಅಥವಾ ಕೆಪಿಸಿಸಿ ಅಧ್ಯಕ್ಷರಾಗುತ್ತಾರೆ ಎಂಬ ಬಗ್ಗೆಯಾಗಲಿ ನನಗೆ ಯಾವುದೇ ಮಾಹಿತಿ ಇಲ್ಲ. ಹೈಕಮಾಂಡ್ ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತದೆ. ಹೈಕಮಾಂಡ್ ಯಾವುದೇ ನಿರ್ಧಾರ ಕೈಗೊಂಡರೂ ನಾವು ಸ್ವಾಗತಿಸುತ್ತೇವೆ ಎಂದಿದ್ದಾರೆ.   ಕೆ.ಸಿ. ವೇಣುಗೋಪಾಲ್ ನೇತೃತ್ವದ ತಂಡ ಕಳೆದ ಎರಡು ದಿನಗಳಿಂದ ಎಲ್ಲ ಮುಖಂಡ ರೊಂದಿಗೆ ಪ್ರತ್ಯೇಕವಾಗಿ ಚರ್ಚಿಸಿ ಅಭಿಪ್ರಾಯ ಸಂಗ್ರಹಿಸಿದೆ. ಪಕ್ಷದ ನಿಲುವು ಹಾಗೂ ಸರ್ಕಾರದ ಸಾಧನೆಗಳನ್ನು ಜನರಿಗೆ ತಲುಪಿಸಲು ವಕ್ತಾರರು ಯಾವ ರೀತಿ ಕೆಲಸ ಮಾಡಬೇಕು ಎಂಬ ಬಗ್ಗೆ ಸ್ಪಷ್ಟ ಸೂಚನೆ ನೀಡಿದ್ದಾರೆ. ಚುನಾವಣೆ ತಯಾರಿ ಬಗ್ಗೆಯೂ ಸಾಕಷ್ಟು ಚರ್ಚೆಗಳು ನಡೆದಿವೆ. ಈ ಮಧ್ಯೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ಚರ್ಚೆಯಾಗಿರುವ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಹೇಳಿದರು.

ಭೂ ಕಬಳಿಕೆ ಆರೋಪಕ್ಕೆ ಗುರಿಯಾಗಿ ನ್ಯಾಯಾಲಯದಿಂದ ನಾಲ್ಕು ಬಾರಿ ಸಮನ್ಸ್ ಪಡೆದಿರುವ ಬಿಜೆಪಿಯ ಮಾಜಿ ಶಾಸಕ ನಂದೀಶ್ ರೆಡ್ಡಿ ಅವರನ್ನು ರಕ್ಷಣೆ ಮಾಡುತ್ತಿಲ್ಲ.
ನಾಲ್ಕು ಬಾರಿ ಸಮನ್ಸ್ ಜಾರಿಯಾದರೂ ಪೊಲೀಸರು ಯಾಕೆ ಕ್ರಮ ಕೈಗೊಂಡಿಲ್ಲ ಎಂಬುದರ ಬಗ್ಗೆ ನನಗೆ ಮಾಹಿತಿ ಇಲ್ಲ. ಒಂದು ವೇಳೆ ಪೊಲೀಸರು ಕಾನೂನಿಗೆ ವಿರುದ್ಧವಾಗಿ ನಂದೀಶ್ ರೆಡ್ಡಿ ಅವರಿಗೆ ಬೆಂಬಲ ನೀಡುತ್ತಿದ್ದರೆ ಸಂಬಂಧಪಟ್ಟವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳುತ್ತೇನೆ. ನ್ಯಾಯಾಲಯದ ಆದೇಶವನ್ನು ಎಲ್ಲರೂ ಪಾಲಿಸಲೇಬೇಕು. ಈ ವಿಷಯದಲ್ಲಿ ರಾಜಕೀಯ ಒತ್ತಡಕ್ಕೆ ಮಣಿಯುವುದಿಲ್ಲ ಎಂದು ಸ್ಪಷ್ಟಪಡಿಸಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin