ಖಾನಾಪುರ ತಾಲೂಕಿನ ಗವ್ವಾಳಿ ಗ್ರಾಮದ 27 ವಿದ್ಯಾರ್ಥಿಗಳಿಗೆ ಜ್ವರ : ಡೆಂಘೀ ಶಂಕೆ

ಈ ಸುದ್ದಿಯನ್ನು ಶೇರ್ ಮಾಡಿ

Fever

ಬೆಳಗಾವಿ, ಸೆ.27-ಸರ್ಕಾರಿ ಶಾಲೆಯೊಂದರ 27 ವಿದ್ಯಾರ್ಥಿಗಳಲ್ಲಿ ಜ್ವರ ಕಾಣಿಸಿಕೊಂಡಿದ್ದು, ಡೆಂಘೀ ಶಂಕೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಆತಂಕ ಮನೆ ಮಾಡಿದೆ. ಖಾನಾಪುರ ತಾಲೂಕಿನ ಗವ್ವಾಳಿ ಗ್ರಾಮದ ಸರ್ಕಾರಿ ಶಾಲೆಯ 27 ವಿದ್ಯಾರ್ಥಿಗಳಲ್ಲಿ ಜ್ವರ ಕಾಣಿಸಿಕೊಂಡಿದ್ದು, ಡೆಂಘೀ ಶಂಕೆ ಇರುವ ಇಬ್ಬರು ವಿದ್ಯಾರ್ಥಿಗಳು ಸೇರಿ ಒಟ್ಟು 17 ಮಕ್ಕಳ ರಕ್ತದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಉಳಿದ ವಿದ್ಯಾರ್ಥಿಗಳನ್ನು ಖಾನಾಪುರ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಗವ್ವಾಳಿ ಗ್ರಾಮ ಕಾಡಂಚಿನ ಪ್ರದೇಶವಾಗಿದ್ದು, ಕಲುಷಿತ ನೀರು ಸೇವನೆಯಿಂದ ಜ್ವರ ಕಾಣಿಸಿಕೊಂಡಿರಬಹುದೆಂದು ವೈದ್ಯರು ಹೇಳಿದ್ದು, ರಕ್ತದ ಮಾದರಿ ಪರೀಕ್ಷಾ ವರದಿ ಬಂದ ನಂತರ ಡೆಂಘೀ ಇದೆಯೋ, ಇಲ್ಲವೋ ಎಂಬುದು ಖಚಿತವಾಗಲಿದೆ ಎಂದು ತಿಳಿಸಿದ್ದಾರೆ. ಎಲ್ಲಾ ವಿದ್ಯಾರ್ಥಿಗಳಿಗೂ ಟೈಫಾಯಿಡ್‍ಆಗಿದ್ದು ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ. ಕೆಲವರ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ ಎಂದು ಡಾ.ಎ.ಎಸ್.ನರಟ್ಟಿ ತಿಳಿಸಿದ್ದಾರೆ.  ಈ ಹಿನ್ನೆಲೆಯಲ್ಲಿ ಆರೋಗ್ಯ ಶಿಕ್ಷಣ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

► Follow us on –  Facebook / Twitter  / Google+

Facebook Comments

Sri Raghav

Admin