ಖಾಸಗಿ ಬಸ್ ಮೇಲೆ ವಿದ್ಯುತ್ ಕಂಬ ಬಿದ್ದು ಚಾಲಕ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

BUs--02

ರಾಮನಗರ, ನ.30-ಮದುವೆಗೆಂದು ಜನರನ್ನು ಕರೆತಂದಿದ್ದ ಖಾಸಗಿ ಬಸ್ ಮೇಲೆ ವಿದ್ಯುತ್ ಕಂಬ ಮುರಿದು ಬಿದ್ದು ವಿದ್ಯುತ್ ಹರಿದು ಚಾಲಕ ಸಾವನ್ನಪ್ಪಿರುವ ಘಟನೆ ಬಿಡದಿ ಬಳಿ ನಡೆದಿದೆ. ಬಿಡದಿಯ ಬಾನಂದೂರಿನಿಂದ ಗಂಡಿನ ಕಡೆಯವರನ್ನು ಕರೆದುಕೊಂಡು ಬಂದಿದ್ದ ಶ್ರೀ ಸಾಯಿ ಹೆಸರಿನ ಖಾಸಗಿ ಬಸ್ ಕೆಂಗಲ್‍ನಲ್ಲಿ ತಿಮ್ಮಯ್ಯ ದಾಸೇಗೌಡ ಕಲ್ಯಾಣ ಮಂಟಪದಲ್ಲಿ ಜನರನ್ನು ಇಳಿಸಿ ರಿವರ್ಸ್ ತೆಗೆದುಕೊಳ್ಳುವ ವೇಳೆ ವಿದ್ಯುತ್ ಕಂಬ ಬಸ್ ಮೇಲೆ ಬಿದ್ದು ಚಾಲಕ ಸಾವನ್ನಪ್ಪಿದ್ದಾನೆ.
ಜನರನ್ನೆಲ್ಲ ಇಳಿಸಿದ ಮೇಲೆ ಈ ಘಟನೆ ನಡೆದಿದ್ದರಿಂದ ಭಾರೀ ಅನಾಹುತ ತಪ್ಪಿದಂತಾಗಿದೆ. ಚನ್ನಪಟ್ಟಣ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು , ಮುಂದಿನ ಕ್ರಮ ಜರುಗಿಸಲಾಗಿದೆ.

Facebook Comments

Sri Raghav

Admin