ಗಂಗಾನದಿಯಲ್ಲಿ ಒಂದೇ ಕುಟುಂಬದ 6 ಮಂದಿ ಜಲಸಮಾಧಿ

ಈ ಸುದ್ದಿಯನ್ನು ಶೇರ್ ಮಾಡಿ

Gaga-River

ಪಾಟ್ನಾ, ಸೆ.14- ನಾಲ್ವರು ಮಕ್ಕಳೂ ಸೇರಿದಂತೆ ಒಂದೇ ಕುಟುಂಬದ ಆರು ಮಂದಿ ಜಲಸಮಾಧಿಯಾದ ಘಟನೆ ಬಿಹಾರದ ಪಾಟ್ನಾ ಜಿಲ್ಲೆಯ ಮರಂಚಿ ಗ್ರಾಮದ ಗಂಗಾ ನದಿಯಲ್ಲಿ ಸಂಭವಿಸಿದೆ. ಕುಟುಂಬದ ಆರು ಮಂದಿ ನದಿಯಲ್ಲಿ ಸ್ನಾನ ಮಾಡುತ್ತಿದ್ದಾಗ ಬಾಲಕನೊಬ್ಬ ನೀರಿನಲ್ಲಿ ಮುಳುಗಿದ ಆತನನ್ನು ರಕ್ಷಿಸಲು ಮುಂದಾದ ಇನ್ನಿಬ್ಬರು ನೀರುಪಾಲಾದರು ಅವರ ರಕ್ಷಣೆಗೆ ಧಾವಿಸಿದ ಎಲ್ಲರೂ ಒಬ್ಬೊಬ್ಬರಾಗಿ ಮುಳುಗಿ ಮೃತಪಟ್ರು ಎಂದು ಪಾಟ್ನಾ ಜಿಲ್ಲಾ ದಂಡಾಧಿಕಾರಿ ಸಂಜಯ್‍ಕುಮಾರ್ ಅಗರ್‍ವಾಲ್ ಹೇಳಿದ್ದಾರೆ.  ಆರು ಮೃತದೇಹಗಳನ್ನು ಹೊರಕ್ಕೆ ತೆಗೆಯಲಾಗಿದೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin