ಗಂಗಾವತಿಯಲ್ಲಿ ಧ್ವಜ ಕಟ್ಟುವ ವಿಚಾರದಲ್ಲಿ ಎರಡು ಕೋಮಿನ ನಡುವೆ ಘರ್ಷಣೆ : ಲಾಠಿ ಚಾರ್ಜ್

ಈ ಸುದ್ದಿಯನ್ನು ಶೇರ್ ಮಾಡಿ

koppala

ಗಂಗಾವತಿ (ಕೊಪ್ಪಳ), ಡಿ.12 – ಧ್ವಜ ಕಟ್ಟುವ ವಿಚಾರದಲ್ಲಿ ಎರಡು ಕೋಮಿನ ನಡುವೆ ಉಂಟಾದ ಘರ್ಷಣೆಯಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ ನಡೆದು ಪರಿಸ್ಥಿತಿ ಉದ್ರಿಕ್ತಗೊಂಡಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್ ನಡೆಸಿದ್ದು, 144 ಕಲಂ ಜಾರಿ ಮಾಡಲಾಗಿದೆ. ಪರಿಸ್ಥಿತಿ ನಿಯಂತ್ರಣದಲ್ಲಿದ್ದರೂ ಬೂದಿ ಮುಚ್ಚಿದ ಕೆಂಡದ ವಾತಾವರಣ ನಿರ್ಮಾಣವಾಗಿದೆ. ಪರಿಸ್ಥಿತಿ ನಿಯಂತ್ರಿಸಲು 9 ಕೆಎಸ್‍ಆರ್‍ಪಿ, 7 ಡಿಎಆರ್ ತುಕಡಿಗಳನ್ನು ನಿಯೋಜಿಸಲಾಗಿದೆ. ಐಜಿಪಿ ಮುರುಗನ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದು, ಪರಿಸ್ಥಿತಿ ಅವಲೋಕಿಸುತ್ತಿದ್ದಾರೆ.

ನಗರದ ಗುಂಡಮ್ಮ ಕ್ಯಾಂಪ್‍ನ ವೀರಾಂಜನೇಯ ದೇವಸ್ಥಾನದ ಹತ್ತಿರ ಈದ್ ಮಿಲಾದ್ ಹಬ್ಬವಾಗಿ ಲಕ್ಷ್ಮೀಬಾಯಿ ನಿವಾಸದ ಮೇಲೆ ಒಂದು ಗುಂಪು ಧ್ವಜ ಕಟ್ಟಿದ್ದರು. ಇದನ್ನು ಲಕ್ಷ್ಮೀಬಾಯಿ ವಿರೋಧಿಸಿದರು. ನಂತರ ಹನುಮದ್ ವ್ರತದ ಅಂಗವಾಗಿ ಇನ್ನೊಂದು ಗುಂಪಿನವರು ಧ್ವಜ ಕಟ್ಟಿದಾಗ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆಯಿತಲ್ಲದೆ ಕಲ್ಲು ತೂರಾಟ ಪ್ರಸಂಗವೂ ಉಂಟಾಯಿತು. ತಕ್ಷಣ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು.

ಪ್ರತಿಭಟನೆ: ಘಟನೆಗೆ ಕಾರಣವಾದ ತಪ್ಪಿತಸ್ಥರ ಮೇಲೆ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಹಿಂದೂಪರ ಸಂಘಟನೆ ಕಾರ್ಯಕರ್ತರು ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದರು. ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ನಗರದಲ್ಲಿ ಪೊಲೀಸ್ ಸರ್ಪಗಾವಲು ಹಾಕಲಾಗಿದೆ.

 

> ಯಾವ ಸುದ್ದಿಯನ್ನೂ ಮಿಸ್ ಮಾಡ್ಕೋಬೇಡಿ… :  Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin