‘ಗಂಡಾಂತರಕ್ಕೆ ನೀವೇ ಹೊಣೆ’ : ನ್ಯಾಯಾಧೀಶರಿಗೆ ಟ್ರಂಪ್ ಎಚ್ಚರಿಕೆ

ಈ ಸುದ್ದಿಯನ್ನು ಶೇರ್ ಮಾಡಿ

Trump-01

ವಾಷಿಂಗ್ಟನ್, ಫೆ.6– ಏಳು ಮುಸ್ಲಿಂ ದೇಶಗಳ ಪ್ರಜೆಗಳಿಗೆ ನಿರ್ಬಂಧ ವಿಧಿಸುವ ತಮ್ಮ ಆದೇಶಕ್ಕೆ ತಡೆಯಾಜ್ಞೆ ನೀಡಿದ ನ್ಯಾಯಾಂಗದ ವಿರುದ್ಧ ಕೆಂಡಾಮಂಡಲವಾಗಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಇದರಿಂದ ಏನಾದರೂ ಅಹಿತಕರ ಘಟನೆಗಳು ಸಂಭವಿಸಿದರೆ ಅದಕ್ಕೆ ಫೆಡೆರಲ್ ನ್ಯಾಯಾಧೀಶರು ಮತ್ತು ನ್ಯಾಯಾಲಯವೇ ಹೊಣೆಯಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ನ್ಯಾಯಾಧೀಶರೊಬ್ಬರು ದೇಶವನ್ನು ಇಂಥ ಗಂಡಾಂತರಕ್ಕೆ ಸಿಲುಕಿಸುತ್ತಾರೆ ಎಂಬುವನ್ನು ನಂಬುವುದು ಕಷ್ಟವಾಗಿದೆ. ವಲಸಿಗರಿಂದ ಏನಾದರೂ ಆಪತ್ತು ಬಂದೊದಗಿದರೆ ಅದಕ್ಕೆ  ನ್ಯಾಯಾಧೀಶರು ಮತ್ತು ನ್ಯಾಯಾಂಗ ವ್ಯವಸ್ಥೆಯೇ ಜವಾಬ್ದಾರಿಯಾಗಬೇಕಾಗುತ್ತದೆ ಎಂದು ಟ್ರಂಪ್ ಟ್ವೀಟ್‍ನಲ್ಲಿ ತಿಳಿಸಿದ್ದಾರೆ. ಕೋರ್ಟ್ ಆದೇಶದಿಂದಾಗಿ ಅಮೆರಿಕ ಪ್ರವೇಶಿಸುವ ವಲಸಿಗರನ್ನು ತುಂಬಾ ಎಚ್ಚರಿಕೆಯಿಂದ ತಪಾಸಣೆ ಮಾಡುವಂತೆ ತಾವು ಸ್ವದೇಶ ಭದ್ರತಾ ಇಲಾಖೆಗೆ ತಿಳಿಸಿರುವುದಾಗಿ ಟ್ರಂಪ್ ಹೇಳಿದ್ದಾರೆ.

ಮುಸ್ಲಿಂ ಬಾಹುಳ್ಯವಿರುವ ರಾಷ್ಟ್ರಗಳ ನಾಗರಿಕರು ಅಮೆರಿಕ ಪ್ರವೇಶಿಸಿದಂತೆ ಹೇರಿದ್ದ ನಿಷೇಧವನ್ನು ಮತ್ತೆ ಜಾರಿಗೊಳಿಸಲು ಅವಕಾಶ ನೀಡುವಂತೆ ಕೋರಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತ ಸಲ್ಲಿಸಿದ್ದ ಮನವಿಯನ್ನು ಮೇಲ್ಮನವಿ ನ್ಯಾಯಾಲಯ ತಿರಸ್ಕರಿಸಿತ್ತು. ಇದರಿಂದ ಟ್ರಂಪ್ ಆಡಳಿತಕ್ಕೆ ತೀವ್ರ ಮುಖಭಂಗವಾಗಿತ್ತು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  c

 

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin