ಗಡಿಯಲ್ಲಿ ಇಬ್ಬರು ಉಗ್ರರ ಹತ್ಯೆ, ಒಳನುಸುಳಿದ 20 ಶಸ್ತ್ರಸಜ್ಜಿತ ಉಗ್ರರು, ದೇಶದೆಲ್ಲೆಡೆ ಕಟ್ಟೆಚ್ಚರ..!

ಈ ಸುದ್ದಿಯನ್ನು ಶೇರ್ ಮಾಡಿ

Terrorist--01

ಶ್ರೀನಗರ, ಮೇ 26-ಪಾಕಿಸ್ತಾನ ಗಡಿಯಿಂದ ಭಾರತದೊಳಗೆ 20ಕ್ಕೂ ಹೆಚ್ಚು ಶಸ್ತ್ರಸಜ್ಜಿತ ಉಗ್ರರು ನುಸುಳಿರುವ ಬಗ್ಗೆ ಕೇಂದ್ರ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿರುವಾಗಲೇ ಕಾಶ್ಮೀರ ಕಣಿವೆಯ ಉರಿವಲಯದಲ್ಲಿ ಯೋಧರು ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ. ಉಗ್ರರಿಂದ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿ ಕೊಳ್ಳಲಾಗಿದೆ.  21 ಯೋಧರನ್ನು ಉಗ್ರರು ಬಲಿತೆಗೆದು ಕೊಂಡಿದ್ದ ಜಮ್ಮು-ಕಾಶ್ಮೀರದ ಉರಿ ಸೆಕ್ಟರ್‍ಗೆ ಮತ್ತೆ ನುಸುಳಿ ವಿಧ್ವಂಸಕ ಕೃತ್ಯ ಎಸಗಲು ಸಜ್ಜಾಗಿದ್ದ ಇಬ್ಬರು ಪಾಕ್‍ಬೆಂಬಲಿತ ಉಗ್ರರನ್ನು ಬಿಎಸ್‍ಎಫ್ ಯೋಧರು ಹೊಡೆದುರುಳಿಸಿದ್ದಾರೆ. ಇದರಿಂದ ಸಂಭವಿಸಬಹುದಾದ ಮತ್ತೊಂದು ಹತ್ಯಾಕಾಂಡ ತಪ್ಪಿದಂತಾಗಿದೆ.ದೇಶದೊಳಗೆ ನುಗ್ಗಿರುವ 20ಕ್ಕೂ ಹೆಚ್ಚು ಉಗ್ರರು:

ಭಾರೀ ಶಸ್ತ್ರಸಜ್ಜಿತ 20ಕ್ಕು ಹೆಚ್ಚು ಭಯೋತ್ಪಾದಕರು ದೆಹಲಿ, ಮುಂಬೈ, ರಾಜಸ್ಥಾನ, ಪಂಜಾಬ್, ಚೆನ್ನೈ ಮತ್ತು ಹೈದರಾಬಾದ್ ನಗರಗಳಿಗೆ ನುಸುಳಿರುವ ಬಗ್ಗೆ ಗುಪ್ತಚರ ಇಲಾಖೆ ಈಗಾಗಲೇ ಕೇಂದ್ರ ಸರ್ಕಾರಕ್ಕೆ ಮಾಹಿತಿ ನೀಡಿದ್ದು, ದೇಶದೆಲ್ಲೆಡೆ ಕಟ್ಟೆಚ್ಚರ ವಹಿಸಲಾಗಿದೆ. ಮೆಟ್ರೋ ನಿಲ್ದಾಣಗಳು, ಬಸ್ ಮತ್ತು ರೈಲ್ವೆ ನಿಲ್ದಾಣಗಳು, ಶಾಪಿಂಗ್ ಮಾಲ್‍ಗಳು, ಧಾರ್ಮಿಕ ಸ್ಥಳಗಳು ಹಾಗೂ ಜನಸಂದಣಿ ಇರುವ ಪ್ರದೇಶಗಳ ಮೇಲೆ ಉಗ್ರರು ದಾಳಿ ನಡೆಸುವ ಸಾಧ್ಯತೆ ಇದ್ದು, ವ್ಯಾಪಕ ಬಂದೋಬಸ್ತ್ ಮಾಡಲಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin