ಗಡಿಯಲ್ಲಿ ನಿಲ್ಲದ ಗುಂಡಿನ ಸದ್ದು : ಇಂದು ಮತ್ತೋರ್ವ ಯೋಧ ಹುತಾತ್ಮ, ಇಬ್ಬರು ಉಗ್ರರ ಹತ್ಯೆ
ಶ್ರೀನಗರ, ನ.25-ಕಾಶ್ಮೀರ ಕಣಿವೆಯಲ್ಲಿ ಉಗ್ರರ ಉಪಟಳ ಮುಂದುವರಿದಿದ್ದು, ಬಂಡಿಪೋರಾ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ ನಡೆದ ಗುಂಡಿನ ಚಕಮಕಿಯಲ್ಲಿ ಓಬ್ಬ ಸೇನಾ ಯೋಧ ಮತ್ತು ಇಬ್ಬರು ಉಗ್ರಗಾಮಿಗಳು ಹತರಾಗಿದ್ದಾರೆ. ಉತ್ತರ ಕಾಶ್ಮೀರದ ಬಂಡಿಪೋರಾದ ನೈಡ್ಖಾಯ್ ಪ್ರದೇಶದಲ್ಲಿ ಉಗ್ರಗಾಮಿಗಳು ಇರುವ ಬಗ್ಗೆ ದೊರೆತ ಖಚಿತ ಸುಳಿವಿನ ಮೇರೆಗೆ ಭದ್ರತಾ ಪಡೆಗಳು ಸ್ಥಳಕ್ಕೆ ತೆರಳಿದ್ದರು. ಈ ಸಂದರ್ಭದಲ್ಲಿ ಉಗ್ರರು ಯೋಧರತ್ತ ಗುಂಡು ಹಾರಿಸಿದರು. ನಂತರ ಎನ್ಕೌಂಟರ್ ನಡೆಯಿತು ಎಂದು ಸೇನಾಧಿಕಾರಿಯೊಬ್ಬರು ಹೇಳಿದ್ದಾರೆ. ಭೀಕರ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ ಹಾಗೂ ಓಬ್ಬ ಸೇನಾ ಯೋಧ ಸಹ ಪ್ರಾಣ ಕಳೆದುಕೊಂಡಿದ್ದಾನೆ ಎಂದು ಅವರು ತಿಳಿಸಿದ್ದಾರೆ.
ಕಾಶ್ಮೀರ ಕಣಿವೆಯ ಬಾರಾಮುಲ್ಲಾ ಜಿಲ್ಲೆಯ ಸೊಪೊರ್ ಪ್ರದೇಶದ ತುಜ್ವಾರ್ ಗ್ರಾಮದಲ್ಲೂ ಬಿಎಸ್ಎಫ್ ಯೋಧರು ಮತ್ತು ಉಗ್ರಗಾಮಿಗಳ ನಡುವೆ ಗಂಡಿನ ಚಕಮಕಿ ನಡೆದಿದೆ.
ಠಾಣೆ ಮೇಲೆ ಉಗ್ರರ ದಾಳಿ : ಉತ್ತರ ಕಾಶ್ಮೀರದ ಕುಪ್ವಾರಾ ಜಿಲ್ಲೆಯ ಹಂಡ್ವಾರಾ ಪ್ರದೇಶದ ಪೊಲೀಸ್ ಠಾಣೆ ಮೇಲೆ ಉಗ್ರರು ಕಳೆದ ರಾತ್ರಿ ದಾಳಿ ನಡೆಸಿ ಗ್ರೆನೇಡ್ ಎಸೆದು ಗುಂಡು ಹಾರಿಸಿದ ಘಟನೆಯೂ ವರದಿಯಾಗಿದ. ಇದಕ್ಕೆ ಪ್ರತಿಯಾಗಿ ಪೊಲೀಸರು ಗುಂಡು ಹಾರಿಸಿದ ಕೂಡಲೇ ಉಗ್ರಗಾಮಿಗಳು ಕತ್ತಲಲ್ಲಿ ಕಣ್ಮರೆಯಾದರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
> ಯಾವ ಸುದ್ದಿಯನ್ನೂ ಮಿಸ್ ಮಾಡ್ಕೋಬೇಡಿ… : Eesanje News 24/7 ನ್ಯೂಸ್ ಆ್ಯಪ್ – Click Here to Download