ಗಡಿಯಲ್ಲಿ ಭಾರತೀಯ ಸೇನಾ ನೆಲೆಗಳ ಮೇಲೆ ಪಾಕ್ ಸೈನಿಕರಿಂದ ಮತ್ತೆ ಅಪ್ರಚೋದಿತ ದಾಳಿ

ಈ ಸುದ್ದಿಯನ್ನು ಶೇರ್ ಮಾಡಿ

Firing-01

ಜಮ್ಮು,ಅ.18- ಮತ್ತೆ ಕದನ ವಿರಾಮ ಉಲ್ಲಂಘಿಸಿರುವ ಪಾಕಿಸ್ತಾನ ಸೈನಿಕರು ಗಡಿ ನಿಯಂತ್ರಣ ರೇಖೆಯಲ್ಲಿರುವ ಭಾರತೀಯ ಸೇನಾಪಡೆಯ ಮುಂಚೂಣಿ ನೆಲೆಗಳ ಮೇಲೆ ದಾಳಿ ನಡೆಸಿದೆ.
ಇಂದು ಬೆಳಗಿನ ಜಾವ ಅಪ್ರಚೋದಿತವಾಗಿ ಪಾಕ್ ಸೈನಿಕರು ಲಘು ಶಸ್ತ್ರಾಸ್ತ್ರಗಳು ಮತ್ತು ಮೋರ್ಟಾರ್ ಷೆಲ್‍ಗಳ ದಾಳಿ ನಡೆಸಿವೆ ಎಂದು ರಕ್ಷಣಾ ಇಲಾಖೆ ವಕ್ತಾರೊಬ್ಬರು ತಿಳಿಸಿದ್ದಾರೆ.
ರಜೌರಿ ಜಿಲ್ಲೆಗೆ ಹೊಂದಿಕೊಂಡಿರುವ ಗಡಿ ನಿಯಂತ್ರಣ ರೇಖೆ ಬಳಿ ಇರುವ ಭಾರತೀಯ ಸೇನಾ ನೆಲೆಗಳ ಮೇಲೆ 82ಎಂಎಂ ಮೊರ್ಟಾರ್ ಷೆಲ್‍ಗಳನ್ನುಮತ್ತು ಸ್ವಯಂ ಚಾಲಿತ ಶಸ್ತ್ರಾಸ್ತ್ರಗಳನ್ನು ಬಳಸಿ ಈ ದಾಳಿ ನಡೆಸಿರುವುದಾಗಿ ವಕ್ತಾರರು ತಿಳಿಸಿದ್ದಾರೆ. ಗಡಿಯಲ್ಲಿ ರಾತ್ರಿ ಪಹರೆ ನಡೆಸುತ್ತಿದ್ದ ಭಾರತೀಯ ಸೇನಾಪಡೆಯ ಯೋಧರೂ ಕೂಡ ಪಾಕ್ ಸೈನಿಕರ ಈ ಅಪ್ರಚೋದಿತ ದಾಳಿಗೆ ಪ್ರತಿ ದಾಳಿ ನಡೆಸಿದ್ದಾರೆ. ಇದೇ ವೇಳೆ ನೌಷೇರಾ ಸೆಕ್ಟರ್‍ನಲ್ಲೂ ನಿನ್ನೆ ತಡ ರಾತ್ರಿ ಕೆಲವು ಅಪರಿಚಿತರು ಗುಂಡಿನ ದಾಳಿ ನಡೆಸಿದ್ದರು ಎಂದು ಅವರು ಹೇಳಿದ್ದಾರೆ.

► Follow us on –  Facebook / Twitter  / Google+

Facebook Comments

Sri Raghav

Admin