ಗಡಿಯಲ್ಲಿ ಮತ್ತೆ ಪಾಕ್ ಪುಂಡಾಟ, ಭಾರತ ಯೋಧರ ದಿಟ್ಟ ಪ್ರತ್ಯುತ್ತರ

ಈ ಸುದ್ದಿಯನ್ನು ಶೇರ್ ಮಾಡಿ

Firing--0141
ಜಮ್ಮು, ಜ.30-ಕಣಿವೆ ರಾಜ್ಯ ಕಾಶ್ಮೀರದ ರಜೌರಿ ಜಿಲ್ಲೆಯ ಗಡಿಯಲ್ಲಿ ಪಾಕಿಸ್ತಾನಿ ಸೇನಾ ಪಡೆಗಳು ಇಂದು ಮತ್ತೆ ಪುಂಡಾಟ ನಡೆಸಿದ್ದಾರೆ. ಗಡಿ ನಿಯಂತ್ರಣ ರೇಖೆ(ಎಲ್‍ಒಸಿ)ಯ ಸೇನಾ ಮುಂಚೂಣಿ ನೆಲೆಗಳು ಮತ್ತು ಜನರ ಪ್ರದೇಶಗಳ ಮೇಲೆ ಪಾಕ್ ಯೋಧರು ಗುಂಡಿನ ದಾಳಿ ನಡೆಸಿ ಮಾರ್ಟರ್‍ಗಳನ್ನು ಎಸೆದಿದ್ದಾರೆ. ಕದನ ವಿರಾಮ ಉಲ್ಲಂಘಿಸಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ ಪಾಕ್ ಯೋಧರಿಗೆ ಭಾರತೀಯ ಸೇನೆ ಸೂಕ್ತ ಪ್ರತ್ಯುತ್ತರ ನೀಡಿದ್ದು, ಕೆಲಕಾಲ ಎನ್‍ಕೌಂಟರ್ ನಡೆದಿದೆ. ಯಾವುದೇ ಸಾವು-ನೋವಿನ ವರದಿಯಾಗಿಲ್ಲ.

ರಜೌರಿ ಜಿಲ್ಲೆಯ ನೌಶೆರಾ ಸೆಕ್ಟರ್‍ನ ಎಲ್‍ಒಸಿಯಲ್ಲಿ ಇಂದು ಬೆಳಗ್ಗೆ 7 ಗಂಟೆಯಿಂದ ಪಾಕಿಸ್ತಾನಿ ರೇಂಜರ್‍ಗಳು ಈ ದಾಳಿ ನಡೆಸಿದರು. ಝಾಂಜರ್, ಧಮಕಾ ಮತ್ತು ಕಲಾಲ್ ಬೆಲ್ಟ್ ಪ್ರದೇಶಗಳ ಐದು ಗ್ರಾಮಗಳನ್ನು ಗುರಿಯಾಗಿಟ್ಟುಕೊಂಡು ಭಾರೀ ಷೆಲ್ ದಾಳಿಗಳನ್ನು ನಡೆಸಲಾಗಿದೆ. ಗಡಿ ಪ್ರದೇಶಗಳ ಶಾಲೆಗಳನ್ನು ಬಂದ್ ಮಾಡಲಾಗಿದೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin