ಗಡಿಯಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ

ಈ ಸುದ್ದಿಯನ್ನು ಶೇರ್ ಮಾಡಿ

3-Kiled

ಪಾಟ್ನಾ ಅ.06 : ಭಾರತ ನಡೆಸಿದ ಸರ್ಜಿಕಲ್ ಸ್ಟ್ರೈಕ್ ಗೆ ಪ್ರತ್ರಿಕಾರ ತೀರಿಸಿಕೊಳ್ಳಲು ಹವಣಿಸುತ್ತಿರುವ ಪಾಕ ಇಲ್ಲದ ಪ್ರಯತ್ನ ಮಾಡುತ್ತಲೇ ಇದೆ. ಭಾರತದಲ್ಲಿ ದುಷ್ಕೃತ್ಯ ನಡೆಸಲು ಪಾಕ್ ಸೇನೆಯೇ ಉಗ್ರರನ್ನು ಭಾರತದೊಳಕ್ಕೆ ನುಸುಳಲು ಸಹಾಯ ಮಾಡುತ್ತಿದೆ. ಜಮ್ಮು-ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಉಗ್ರರು ಸೇನಾ ಕ್ಯಾಂಪ್ ನ್ನು ಗುರಿಯಾಗಿರಿಸಿಕೊಂಡು ದಾಳಿ ಉಗ್ರರು ಮಾಡಿದ್ದಾರೆ. ಅ.6 ರಂದು ಬೆಳಿಗ್ಗೆ 5 ಗಂಟೆ ವೇಳೆಯಲ್ಲಿ ಉಗ್ರರು ದಾಳಿ ನಡೆಸಿದ್ದು, ಸೇನಾ ಪಡೆ ಮೂವರು ಉಗ್ರರನ್ನು ಹೊಡೆದುರುಳಿಸಿದೆ.  ಉಗ್ರರ ಅಡಗುದಾಣಗಳನ್ನು ಶೋಧಿಸುತ್ತಿದ್ದ ಸೇನಾಪಡೆ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಉಗ್ರರ ದಾಳಿಯನ್ನು ಸೇನಾಪಡೆ ಸಮರ್ಥವಾಗಿ ಎದುರಿಸಿ ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂಬ ಮಾಹಿತಿ ತಿಳಿದು ಬಂದಿದೆ.

ಬೆಳಿಗ್ಗೆ 5 ಗಂಟೆ ವೇಳೆಯಲ್ಲಿ ಮೊದಲ ಬಾರಿ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಉಗ್ರರನ್ನು ಪತ್ತೆ ಮಾಡುವುದಕ್ಕಾಗಿ ಸೇನಾ ಪಡೆ ಶೋಧ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ 6:30 ಕ್ಕೆ ಮತ್ತೊಮ್ಮೆ ಉಗ್ರರು ದಾಳಿ ನಡೆಸಿದ್ದಾರೆ ಸೇನಾ ಕ್ಯಾಂಪ್ ನ್ನು ಗುರಿಯಾಗಿರಿಸಿಕೊಂಡು ಉಗ್ರ ದಾಳಿ ನಡೆದಿರುವ ಹಿನ್ನೆಲೆಯಲ್ಲಿ ಸ್ಥಳಕ್ಕೆ ಹೆಚ್ಚುವರಿ ಪಡೆಗಳನ್ನು ಕಳಿಸಲಾಗಿದೆ ಎಂದು ಸೇನಾ ಅಧಿಕಾರಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

► Follow us on –  Facebook / Twitter  / Google+

Facebook Comments

Sri Raghav

Admin