ಗಡಿ ನಿಯಂತ್ರಣ ರೇಖೆ (ಎಲ್‍ಒಸಿ) ಬಳಿ ಉದ್ವಿಗ್ನ ಸ್ಥಿತಿ, ಪ್ರಧಾನಿ ತುರ್ತು ಸಭೆ

ಈ ಸುದ್ದಿಯನ್ನು ಶೇರ್ ಮಾಡಿ

Modi-Meet-01

ನವದೆಹಲಿ, ಸೆ.29-ಗಡಿ ನಿಯಂತ್ರಣ ರೇಖೆ (ಎಲ್‍ಒಸಿ) ಬಳಿ ಇತ್ತೀಚಿಗೆ ತಲೆದೋರಿರುವ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಭದ್ರತೆ ಕುರಿತ ಸಂಪುಟ ಸಮಿತಿ (ಸಿಸಿಎಸ್) ಸಭೆ ನಡೆಯಿತು. ಕಾಶ್ಮೀರದ ಉರಿ ವಲಯದ ಸೇನಾ ನೆಲೆ ಮೇಲೆ ಭಯೋತ್ಪಾದಕರು ದಾಳಿ ನಡೆಸಿ 18 ಯೋಧರನ್ನು ಹತ್ಯೆ ಮಾಡಿದ ಬಳಿಕ ಪಾಕಿಸ್ತಾನದೊಂದಿಗೆ ಸಂಬಂಧ ಮತ್ತಷ್ಟು ಹದಗೆಟ್ಟಿರುವ ಹಿನ್ನೆಲೆಯಲ್ಲಿ ಈ ಸಭೆ ಮಹತ್ವದ್ದಾಗಿದೆ. ಗಡಿಯಲ್ಲಿ ಕದನ ವಿರಾಮ ಉಲ್ಲಂಘನೆ ಮತ್ತು ಉಗ್ರಗಾಮಿಗಳಿಂದ ನುಸುಳುವಿಕೆ ಯತ್ನಗಳ ವಿಷಯಗಳು ಸಭೆಯಲ್ಲಿ ಪ್ರಮುಖವಾಗಿ ಪ್ರಸ್ತಾಪವಾಗಿದ್ದು, ಪ್ರಧಾನಿ ಮೋದಿ ಗಂಭೀರ ಪರಾಮರ್ಶೆ ನಡೆಸಿದರೆಂದು ಮೂಲಗಳು ತಿಳಿಸಿವೆ.

ಸೆ.18ರಂದು ನಡೆದ ಉರಿ ದಾಳಿ ಹಿನ್ನೆಲೆಯಲ್ಲಿ ಗಡಿ ನಿಯಂತ್ರಣ ರೇಖೆಯಲ್ಲಿ ಭಾರತೀಯ ಸೇನೆ ಮುಂದಿರುವ ಆಯ್ಕೆಗಳಿಗೆ ಸಂಬಂಧಪಟ್ಟ ವಿಷಯಗಳ ಬಗ್ಗೆಯೂ ಪ್ರಧಾನಿ ಸಮಾಲೋಚನೆ ನಡೆಸಿದ್ದಾರೆ. ಪಾಕಿಸ್ತಾನ ಸೇನಾಪಡೆಗಳು ನಿನ್ನೆಯಿಂದ ಗಡಿಯಲ್ಲಿ ಎರಡು ಬಾರಿ ಕದನ ವಿರಾಮವನ್ನು ಉಲ್ಲಂಘಿಸಿವೆ. ಕಾಶ್ಮೀರದ ನೌಗಮ್ ವಲಯದಲ್ಲಿ ಇಂದು ಸಹ ಪಾಕ್ ಯೋಧರು ಅಪ್ರಚೋದಿತ ದಾಳಿ ನಡೆಸಿ ಭಾರತೀಯ ಸೇನಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.

 ಸಭೆ ಮುಂದೂಡಿಕೆ : ಪಾಕಿಸ್ತಾನಕ್ಕೆ ಮಂಜೂರು ಮಾಡಲಾಗಿದ್ದ ಮಾನ್ಯತೆ ರಾಷ್ಟ್ರ (ಎಂಎಫ್‍ಎನ್) ಸ್ಥಾನಮಾನದ ಬಗ್ಗೆ ಪರಾಮರ್ಶೆ ನಡೆಸಲು ಪ್ರಧಾನಮಂತ್ರಿಯವರ ಅಧ್ಯಕ್ಷತೆಯಲ್ಲಿ ಇಂದು ದೆಹಲಿಯಲ್ಲಿ ಕರೆಯಲಾಗಿದ್ದ ಸಭೆಯನ್ನು ಮುಂದೂಡಲಾಗಿದೆ. ಈ ಸಭೆ ಮುಂದಿನ ವಾರ ನಡೆಯಲಿದೆ ಎಂದು ಮೂಲಗಳು ಹೇಳಿವೆ.

► Follow us on –  Facebook / Twitter  / Google+

Facebook Comments

Sri Raghav

Admin