ಗಣರಾಜ್ಯೋತ್ಸವ ಆಚರಣೆಗೆ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪೆರೇಡ್ ಮೈದಾನದಲ್ಲಿ ಸಕಲ ಸಿದ್ದತೆ

ಈ ಸುದ್ದಿಯನ್ನು ಶೇರ್ ಮಾಡಿ

Republic-Day--01

ಬೆಂಗಳೂರು,ಜ.24-ಗಣರಾಜ್ಯೋತ್ಸವದ ದಿನಾಚರಣೆ ಅಂಗವಾಗಿ ರಾಜ್ಯಮಟ್ಟದ ಸಮಾರಂಭವನ್ನು ಜ.26ರಂದು ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪೆರೇಡ್ ಮೈದಾನದಲ್ಲಿ ಆಯೋಜಿಸಲಾಗಿದ್ದು, ಈಗಾಗಲೇ ಸಕಲ ಸಿದ್ದತೆಗಳನ್ನು ಮಾಡಲಾಗಿದೆ ಎಂದು ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ್ ಪ್ರಸಾದ್ ತಿಳಿಸಿದರು.
ಕಾರ್ಯಕ್ರಮದ ಸಕಲ ಸಿದ್ದತೆ ಕುರಿತು ಸುದ್ದಿಗೋಷ್ಠಿಯಲ್ಲಿ ವಿವರಿಸಿದ ಅವರು, ಸಮಾರಂಭಕ್ಕಾಗಿ ಮೈದಾನವನ್ನು ಈಗಾಗಲೇ ಸಿದ್ದಗೊಳಿಸಲಾದೆ. 11,500 ಜನರಿಗೆ ಆಸನದ ವ್ಯವಸ್ಥೆ ಮಾಡಲಾಗಿದ್ದು, ವೇದಿಕೆ ನಿರ್ಮಾಣ, ಬಾರಿಕೇಡ್ ವ್ಯವಸ್ಥೆಯನ್ನು ಮಾಡಲಾಗಿದೆ. ಧ್ವಜಾರೋಹಣ ಮಾಡುವ ಧ್ವಜಸ್ತಂಭವನ್ನು ನಿರ್ಮಿಸಲಾಗಿದೆ ಎಂದರು. ಪಥ ಸಂಚಲನ ಮತ್ತು ಸಾಂಸ್ಕøತಿಕ ಕಾರ್ಯಕ್ರಮಗಳ ಪೂರ್ವಭಾವಿ ತಾಲೀಮು ಮೂರು ದಿನಗಳ ಕಾಲ ನಡೆಸಲಾಗುತ್ತಿದ್ದು, ಪಂಥಸಂಚಲನದಲ್ಲಿ ಪೊಲೀಸ್, ಸ್ಕೌಟ್ಸ್-ಗೈಡ್, ಎನ್‍ಸಿಸಿ, ಸೇವಾ ದಳ ಹಾಗೂ ವಿವಿಧ ಶಾಲೆಗಳ ಮಕ್ಕಳನೊಳಗೊಂಡಂತೆ ಕವಾಯತ್ ಮತ್ತು ಬ್ಯಾಂಡ್‍ನ ಒಟ್ಟು 30 ತುಕಡಿಗಳಲ್ಲಿ ಸುಮಾರು 20 ಸಾವಿರ ಮಂದಿ ಭಾಗವಹಿಸಲಿದ್ದಾರೆ.

reharsel-republic-day--7

ಶಾಲಾ ಮಕ್ಕಳ ಎರಡು ಸಾಂಸ್ಕøತಿಕ ಕಾರ್ಯಕ್ರಮಗಳಲ್ಲಿ ಸುಮಾರು 1330 ಮಕ್ಕಳು ಭಾಗವಹಿಸಲಿದ್ದು, ಧ್ವಜಾರೋಗಹಣ ಸಂದರ್ಭದಲ್ಲಿ ಪುಷ್ಪವೃಷ್ಟಿ ಮಾಡಲು ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ವ್ಯವಸ್ಥೆ ಮಾಡಲಾಗಿದೆ. ಸಾಂಸ್ಕøತಿಕ ಕಾರ್ಯಕ್ರಮಗಳ ನಂತರ ರಾಜ್ಯಪಾಲರಿಂದ ಬಹುಮಾನ ವಿತರಣೆ ಮಾಡುವ, ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಪಥಸಂಚಲನ ಸಾಂಸ್ಕøತಿಕ ಸಮಾರಂಭಗಳಲ್ಲಿ ಭಾಗವಹಿಸುತ್ತಿರುವ ಮಕ್ಕಳಿಗೆ ಉಪಹಾರ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ವಿವರಿಸಿದರು.

reharsel-republic-day--6

ಕಾರ್ಯಕ್ರಮದ ಪ್ರಯುಕ್ತ ಮೈದಾನಕ್ಕೆ ಸೂಕ್ತ ಬಂದೋಬಸ್ತ್ ವ್ಯವಸ್ಥೆ ನೀಡಲಾಗಿದ್ದು, ಮೈದಾನದಲ್ಲಿ ಭದ್ರತೆ ಮತ್ತು ಸುರಕ್ಷತೆಗಾಗಿ 50 ಸಿಸಿ ಕ್ಯಾಮೆರಾ ವ್ಯವಸ್ಥೆ ಹಾಗೂ ಸೂಕ್ತ ಸಂಚಾರ ನಿಯಂತ್ರಣ ವ್ಯವಸ್ಥೆ ಮಾಡಲಾಗಿದೆ. ಯಾವುದೇ ಆಕಸ್ಮಿಕ ವಿಪತ್ತು ಸಂಭವಿಸಿದ್ದಲ್ಲಿ ತಕ್ಷಣ ಪ್ರತಿಕ್ರಿಯಿಸಲು ಅಗತ್ಯವಿರುವ ಆ್ಯಂಬುಲೆನ್ಸ್, ವೈದ್ಯಕೀಯ ಸೇವೆ ಮತ್ತು ನಗರದ ಹಲವು ಆಸ್ಪತ್ರೆಗಳಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಹಾಸಿಗೆ ಕಾಯ್ದಿರಿಸಲಾಗಿದೆ. ಬೆಂಕಿ ಅವಘಡಗಳನ್ನು ನಿಭಾಯಿಸಲು ಅಗ್ನಿ ಶಾಮಕ ವಾಹನಗಳೊಂದಿಗೆ ಸಾಕಷ್ಟು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದರು. ಬೆಂಗಳೂರು ನಗರ ಜಿಲ್ಲಾಧಿಕಾರಿ ವಿ.ಶಂಕರ್, ಹೆಚ್ಚುವರಿ ಪೊಲೀಸ್ ಆಯುಕ್ತ ಬಿ.ಕೆ.ಸಿಂಗ್ ಮುಂತಾದವರು ಉಪಸ್ಥಿತರಿದ್ದರು.

reharsel-republic-day-5

reharsel-republic-day--2

Facebook Comments

Sri Raghav

Admin