ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಬೆಂಗಳೂರಿನ ಕೆಲವು ರಸ್ತೆಗಳಲ್ಲಿ ಸಂಚಾರ ನಿರ್ಬಂಧ

ಈ ಸುದ್ದಿಯನ್ನು ಶೇರ್ ಮಾಡಿ

Kabban-Road--02

ಬೆಂಗಳೂರು, ಜ.24- ಗಣರಾಜ್ಯೋತ್ಸವದ ಅಂಗವಾಗಿ ನಗರ ಸಂಚಾರ ಪೊಲೀಸರು ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪೆರೇಡ್ ಮೈದಾನದ ಸುತ್ತಮುತ್ತ ಸೂಕ್ತ ಸಂಚಾರ ವ್ಯವಸ್ಥೆಯನ್ನು ಮಾಡಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಸುನಿಲ್‍ಕುಮಾರ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಳದಿಪಾಸ್ ಹೊಂದಿರುವ ಆಹ್ವಾನಿತರು ಕಬ್ಬನ್ ರಸ್ತೆಯಲ್ಲಿ ಸಂಚರಿಸಿ ಮೈದಾನಕ್ಕೆ ಪ್ರವೇಶ ದ್ವಾರ 1ರ ಮುಖಾಂತರ ಹಾಗೂ ಬಿಳಿ ಪಾಸ್ ಹೊಂದಿರುವ ಎಲ್ಲಾ ಗಣ್ಯರು ಪ್ರವೇಶ ದ್ವಾರ 2ರಲ್ಲಿ ಮತ್ತು ಪಿಂಕ್ ಪಾಸುದಾರರು ಪ್ರವೇಶ ದ್ವಾರ 3ರಲ್ಲಿ ಪ್ರವೇಶ ಮಾಡಬೇಕು. ಹಸಿರು ಪಾಸ್ ಹೊಂದಿರುವವರು ಪ್ರವೇಶ ದ್ವಾರ 4 ಮತ್ತು 5 ರಲ್ಲಿ ಕಾಲ್ ನಡಿಗೆಯಲ್ಲಿ ಪ್ರವೇಶಿಸಬೇಕೆಂದು ಹೇಳಿದರು.

ಎಂ.ಜಿ.ರಸ್ತೆ, ಅನಿಲ್‍ಕುಂಬ್ಳೆ ವೃತ್ತದಿಂದ ಮೆಟ್ರೋ ನಿಲ್ದಾಣದವರೆಗೆ ಕಾರ್ಯಕ್ರಮದಲ್ಲಿ ಭಾಗವಹಿಸುವ ಶಾಲಾ ಮಕ್ಕಳನ್ನು ಕರೆತರುವ ಬಿಎಂಟಿಸಿ ಬಸ್‍ಗಳ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.26ರಂದು ಬೆಳಗ್ಗೆ 8.30ರಿಂದ 10.30ರವರೆಗೆ ಕಬ್ಬನ್ ರಸ್ತೆ ಮಾರ್ಗದ ಬಿಆರ್‍ವಿ ಜಂಕ್ಷನ್‍ನಿಂದ ಕಾಮರಾಜ ಜಂಕ್ಷನ್‍ವರೆಗೆ ಎರಡು ದಿಕ್ಕುಗಳಿಂದ ಸಂಚಾರವನ್ನು ನಿರ್ಬಂಧಿಸಿ ಪರ್ಯಾಯ ಮಾರ್ಗದಲ್ಲಿ ಸಂಚರಿಸುವ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಹೇಳಿದರು. ಮೈದಾನ ಹಾಗೂ ಸುತ್ತಮುತ್ತ ವಾಹನಗಳ ನಿಲುಗಡೆಗೆ ಸ್ಥಳಾವಕಾಶದ ಕೊರತೆ ಇರುವುದರಿಂದ ಹಾಗೂ ಸಂಚಾರ ದಟ್ಟಣೆಯನ್ನು ತಡೆಗಟ್ಟಲು ಸಾರ್ವಜನಿಕರು ನಗರ ಸಾರಿಗೆ ವ್ಯವಸ್ಥೆ ಹಾಗೂ ಮೆಟ್ರೋ ಸೇವೆಯನ್ನು ಬಳಸುವಂತೆ ಸುನಿಲ್‍ಕುಮಾರ್ ಮನವಿ ಮಾಡಿದರು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin