ಗಣೇಶ ವಿಸರ್ಜನೆ ವೇಳೆ ಪೊಲೀಸ್ ಅಧಿಕಾರಿಯನ್ನು ನೀರಿನಲ್ಲಿ ಮುಳುಗಿಸಿ ಕೊಲ್ಲಲೆತ್ನಿಸಿದರು..! ( ವಿಡಿಯೋ)

ಈ ಸುದ್ದಿಯನ್ನು ಶೇರ್ ಮಾಡಿ


ಥಾಣೆ, ಸೆ.7- ಗಣೇಶ ವಿಗ್ರಹ ವಿಸರ್ಜನೆ ವೇಳೆ ನಾಲ್ವರು ಯುವಕರು ಪೊಲೀಸ್ ಅಧಿಕಾರಿಯೊಬ್ಬರನ್ನು ನೀರಿನಲ್ಲಿ ಮುಳುಗಿಸಿ ಕೊಲೆ ಯತ್ನ ನಡೆಸಿರುವ ಘಟನೆ ಮಹಾರಾಷ್ಟ್ರದ ಥಾಣೆಯ ಕಲ್ಯಾಣ್ ನಗರದಲ್ಲಿಂದು ನಡೆದಿದೆ. ಈ ದೃಶ್ಯಾವಳಿಯು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಗಣೇಶ ವಿಸರ್ಜನೆ ವೇಳೆ ಯಾವುದೇ ಅಹಿತಕರ ಘಟನೆ ನಡೆಸಬಾರದು ಹಾಗೂ ಶಿಸ್ತಿನಿಂದ ಇರುವಂತೆ ಸಬ್ಇನ್ಸ್ಪೆಕ್ಟರ್ ನಿತಿನ್ ದಾಂಡು ದಾಗ್ಗಲೆ ಯುವಕರಿಗೆ ಎಚ್ಚರಿಕೆ ನೀಡಿದರು.  ಇದನ್ನೇ ದ್ವೇಷ ಸಾಧಿಸಿದ ಯುವಕರು ಪೊಲೀಸ್ ಸಮವಸ್ತ್ರದಲ್ಲಿದ್ದ ನಿತಿನ್ ದಾಗ್ಗಲೆ ಅವರನ್ನು ಎಳೆದು ಯುವಕನೊಬ್ಬ ನೀರಿನಲ್ಲಿ ಮುಳುಗಿಸಿ ಅದುಮಿದಾಗ ಪೊಲೀಸ್ ಜೀವ ಉಳಿಸಿಕೊಳ್ಳಲು ಒದ್ದಾಡುತ್ತಿರುವ ವಿಡಿಯೊ ದೃಶ್ಯ ಸಾಮಾಜಿಕ ತಾಣಗಳಲ್ಲಿ ಪ್ರಸಾರವಾಗಿದೆ.
ಯುವಕನಿಂದ ತಪ್ಪಿಸಿಕೊಂಡು ಮೇಲೆ ಬಂದ ನಂತರ ದಾಗ್ಗಲೆ ಮೇಲೆ ಇನ್ನೂ ಮೂವರು ಯುವಕರು ಹಲ್ಲೆ ನಡೆಸಿರುವುದು ವಿಡಿಯೋದಲ್ಲಿ ದಾಖಲಾಗಿದೆ.

ಅದೃಷ್ಟವಶಾತ್ ಕೋಲ್ಸ್ವಾಡಿ ಪೊಲೀಸ್ ಠಾಣೆ ಸಬ್ಇನ್ಸ್ಪೆಕ್ಟರ್ ನಿತಿನ್ ದಾಂಡು (38) ಅಪಾಯದಿಂದ ಪಾರಾಗಿದ್ದು ಚೇತರಿಸಿಕೊಳ್ಳುತ್ತಿದ್ದಾರೆ. ಈ ಸಂಬಂಧ ಕೋಲ್ಸ್ವಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ. ಕಳೆದ 15 ದಿನಗಳಲ್ಲಿ ವಾಣಿಜ್ಯ ನಗರಿ ಮುಂಬೈನಲ್ಲಿ ಪುಂಡರು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದ 7 ಪ್ರಕರಣಗಳು ದಾಖಲಾಗಿದ್ದು, ಈ ಸಂಬಂಧ ಶಿವಸೇನೆ ಮುಖ್ಯಸ್ಥ ಉದ್ಧವ್ಠಾಕ್ರೆ, ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿ ಮಾಡಿ ಚರ್ಚಿಸಿ ಆರೋಪಿಗಳನ್ನು ಬಂಧಿಸಬೇಕೆಂದು ಒತ್ತಾಯಿಸಿದ್ದಾರೆ.

► Follow us on –  Facebook / Twitter  / Google+

Facebook Comments

Sri Raghav

Admin