ಗದಗ ಜಿಲ್ಲೆಗೂ ಕಾಲಿಟ್ಟ ಡೆಡ್ಲಿ ನೀಫಾ ವೈರಸ್…!

ಈ ಸುದ್ದಿಯನ್ನು ಶೇರ್ ಮಾಡಿ

Gadag--01

ಗದಗ, ಮೇ 24- ಮಹಾಮಾರಿ ಶಂಕಿತ ನೀಫಾ ವೈರಸ್ ಗದಗ ಜಿಲ್ಲೆಗೂ ಕಾಲಿಟ್ಟಿದೆ ಎನ್ನಲಾಗುತ್ತಿದ್ದು, ಜಿಲ್ಲೆಯ ರೋಣ ತಾಲೂಕಿನ ವ್ಯಕ್ತಿಯೊಬ್ಬರಿಗೆ ವೈರಸ್ ಇದೆ ಎಂದು ಶಂಕಿಸಲಾಗಿದೆ.  ಶಂಕಿತ ವ್ಯಕ್ತಿಯನ್ನು ಗದಗದ ಜಿಮ್ಸ್ ಆಸ್ಪತ್ರೆಯ ವಿಶೇಷ ಘಟಕದಲ್ಲಿಟ್ಟುಕೊಂಡು ಚಿಕಿತ್ಸೆ ನೀಡಲಾಗುತ್ತಿದೆ.  ಈ ವ್ಯಕ್ತಿ ಕೆಲ ತಿಂಗಳ ಕಾಲ ಕೇರಳದ ಕ್ಯಾಲಿಕಟ್ ಸಮೀಪದಲ್ಲಿ ಕೆಲಸ ಮಾಡುತ್ತಿದ್ದರು. ಇತ್ತೀಚೆಗೆ ಗದಗ ಜಿಲ್ಲೆಯ ತವರೂರಿಗೆ ಮರಳಿದ್ದು, ಕಳೆದ ಒಂದೆರಡು ವಾರಗಳಿಂದ ಜ್ವರ, ತಲೆನೋವು, ವಾಂತಿ, ಬೇಧಿ, ಕೆಮ್ಮು ಕಾಣಿಸಿಕೊಂಡಿದ್ದು, ನಿಶ್ಶಕ್ತರಾಗಿದ್ದರು. ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ತಪಾಸಣೆ ನಡೆಸಿದ ವೈದ್ಯರು ನೀಫಾ ವೈರಸ್ ಇರಬಹುದೆಂಬ ಶಂಕೆ ವ್ಯಕ್ತಪಡಿಸಿದ್ದು, ಆತನ ರಕ್ತ ಮಾದರಿಯನ್ನು ಪುಣೆಯ ಪ್ರಯೋಗಾಲಯಕ್ಕೆ ರವಾನಿಸಲಾಗಿದೆ.  ವರದಿ ಬಂದ ನಂತರ ಆತನಿಗೆ ಹೆಚ್ಚಿನ ಚಿಕಿತ್ಸೆ ನೀಡಲಾಗುವುದು ಎಂದು ಜಿಮ್ಸ್‍ನ ಆಡಳಿತ ವೈದ್ಯಾಧಿಕಾರಿ ಎ.ಬಿ.ಪಾಟೀಲ್ ಈ ಸಂಜೆಗೆ ಸ್ಪಷ್ಟಪಡಿಸಿದ್ದಾರೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin