ಗರ್ಭಿಣಿಯರಿಗೂ ಮಧ್ಯಾಹ್ನದ ‘ಬಿಸಿಯೂಟದ ಭಾಗ್ಯ’

ಈ ಸುದ್ದಿಯನ್ನು ಶೇರ್ ಮಾಡಿ

Pregnent--02

ಬೆಂಗಳೂರು, ನ.13- ಗರ್ಭಿಣಿಯರಿಗೂ ಸಹ ಮಧ್ಯಾಹ್ನದ ಬಿಸಿಯೂಟ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಉಮಾಶ್ರೀ ತಿಳಿಸಿದ್ದಾರೆ.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಆಯೋಜಿಸಿದ್ದ ಮಕ್ಕಳ ಹಬ್ಬ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮಕ್ಕಳಲ್ಲಿನ ಅಪೌಷ್ಠಿಕತೆ ಹೋಗಲಾಡಿಸಲು ತಾಯಂದಿರಿಗೆ ಪೌಷ್ಠಿಕ ಆಹಾರ ನೀಡಬೇಕು. ಈ ಹಿನ್ನೆಲೆಯಲ್ಲಿ ರಾಜ್ಯದ 2, 3 ತಾಲ್ಲೂಕುಗಳಲ್ಲಿ ಜಾರಿಗೆ ತಂದಿರುವ ಗರ್ಭಿಣಿಯರಿಗೂ ಮಧ್ಯಾಹ್ನ ಬಿಸಿಯೂಟ ನೀಡುವ ಯೋಜನೆಯನ್ನು ರಾಜ್ಯದಾದ್ಯಂತ ವಿಸ್ತರಿಸಲಾಗುವುದು ಎಂದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗ ದೊಂದಿಗೆ ಮಾತೃಪುಷ್ಠಿ ವರ್ಧನೆ ಕಾರ್ಯಕ್ರಮವನ್ನು ಜಾರಿಗೆ ತರಲಾಗಿದೆ ಎಂದು ತಿಳಿಸಿದರು. ಕಳೆದು ಹೋಗುತ್ತಿರುವ ಸಾಂಸ್ಕೃತಿಯ ವೈಭೋಗವನ್ನು ಮುಂದಿನ ಪೀಳಿಗೆಗೂ ತಲುಪಿಸುವ ಉದ್ದೇಶದಿಂದ ಮಕ್ಕಳ ಹಬ್ಬ ಆಯೋಜಿಸಲಾಗಿದೆ ಎಂದು ಹೇಳಿದರು. ಕಳೆದ ವರ್ಷ ಗ್ರಾಮೀಣ ಕ್ರೀಡೆ ಉತ್ಸವಕ್ಕೆ ಆದ್ಯತೆ ನೀಡಲಾಗಿತ್ತು. ಈಗ ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಉತ್ಸವಕ್ಕೆ ಆದ್ಯತೆ ನೀಡಲಾಗಿದೆ. ಬಾಲಭವನವನ್ನು ಜಾನಪದ ಮತ್ತು ಸಾಂಸ್ಕೃತಿಕ ಹಿರಿಮೆಯನ್ನು ಬಿಂಬಿಸುವ ಕಾರ್ಯಕ್ರಮ ಹೆಚ್ಚಾಗಬೇಕು. ಆಗ ಮಕ್ಕಳನ್ನು ಆಕರ್ಷಿಸಲು ಅನುಕೂಲವಾಗಲಿದೆ ಎಂದು ತಿಳಿಸಿದರು. ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿಬಾಯಿ, ಬಾಲಭವನದ ಅಧ್ಯಕ್ಷೆ ಅಂಜಲಿ ಲಿಂಬಾಳ್ಕರ್ ಉಪಸ್ಥಿತರಿದ್ದರು.

 

► Follow us on –  Facebook / Twitter  / Google+

Facebook Comments

Sri Raghav

Admin