ಗಾಂಜಾ ಆಯಿಲ್ ಮಾರಾಟ ಮಾಡುತ್ತಿದ್ದ ಅಂತರರಾಜ್ಯ ಕಳ್ಳರ ಬಂಧನ

ಈ ಸುದ್ದಿಯನ್ನು ಶೇರ್ ಮಾಡಿ

2Arrested-Bengalurb

ಬೆಂಗಳೂರು, ಜು.30- ಮಾದಕ ವಸ್ತು ಗಾಂಜಾ ಆಯಿಲ್ ಮಾರಾಟ ಮಾಡುತ್ತಿದ್ದ ಇಬ್ಬರು ಅಂತರರಾಜ್ಯ ಕಳ್ಳರನ್ನು ಸುದ್ದಗುಂಟೆಪಾಳ್ಯ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಬಂಧಿತರಿಂದ 6ಕೆಜಿ 561ಗ್ರಾಂ ತೂಕದ ಗಾಂಜಾ ಆಯಿಲ್ ವಶಪಡಿಸಿಕೊಂಡಿದ್ದಾರೆ. ಕೇರಳದ ಕಣ್ಣೂರು ಜಿಲ್ಲೆಯ ತಾಲಿಪರಿಂಬಿಯಾ ತಾಲ್ಲೂಕಿನ ಅಲಕೋಡಿ ಗ್ರಾಮದ ಜಾನ್ಸನ್‍ಜೋಸೆಫ್(31) ಹಾಗೂ ಇಡುಕ್ಕಿ ತಾಲ್ಲೂಕಿನ ಬೀಜು ಅಬ್ರಹಾಂ(38) ಬಂಧಿತ ಆರೋಪಿಗಳು.
ಆರೋಪಿಗಳು ಸುದ್ದಗುಂಟೆಪಾಳ್ಯ ಠಾಣೆ ವ್ಯಾಪ್ತಿಯ ತಾವರೆಕೆರೆ ಬಸ್ ನಿಲ್ದಾಣ ಸಮೀಪದ ಆಲದಮರದ ಕಟ್ಟೆಯ ಬಳಿ ಗಾಂಜಾ ಆಯಿಲ್ ಇಟ್ಟುಕೊಂಡು ಮಾರಾಟ ಮಾಡಲು ಯತ್ನಿಸುತ್ತಿದ್ದರು.

ಖಚಿತ ಮಾಹಿತಿ ಮೇರೆಗೆ ಆಗ್ನೇಯ ವಿಭಾಗದ ಉಪಪೊಲೀಸ್ ಕಮೀಷನರ್ ಡಾ.ಬೋರಲಿಂಗಯ್ಯ ಅವರ ಮಾರ್ಗದರ್ಶನದಲ್ಲಿ ಮೈಕೋಲೇಔಟ್ ಉಪವಿಭಾಗದ ಸಹಾಯಕ ಪೊಲೀಸ್ ಕಮೀಷನರ್ ಎಂ.ಎಂ.ಯೋಗೇಂದ್ರನಾಥ್ ನೇತೃತ್ವದಲ್ಲಿ ಸುದ್ದಗುಂಟೆಪಾಳ್ಯ ಠಾಣೆಯ ಇನ್ಸ್‍ಪೆಕ್ಟರ್ ಬಿ.ಪಿ.ಗಿರೀಶ್ ಮತ್ತು ಸಿಬ್ಬಂದಿ ದಾಳಿ ಮಾಡಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೇರಳ ರಾಜ್ಯದ ಗುಡ್ಡಗಾಡು ಪ್ರದೇಶಗಳಲ್ಲಿ ಗಾಂಜಾಆಯಿಲ್‍ನನ್ನು ಹೆಚ್ಚಾಗಿ ಉತ್ಪತ್ತಿ ಮಾಡಲಾಗುತ್ತದೆ. ಒಂದು ಕೆಜಿ ಗಾಂಜಾ ಆಯಿಲ್ ಉತ್ಪತ್ತಿ ಮಾಡಲು ಸುಮಾರು 6ಕೆಜಿ ಹಸಿ ಗಾಂಜಾ ಸೊಪ್ಪನ್ನು ಬಳಸಲಾಗುತ್ತದೆ. ಇದು ದ್ರವರೂಪದ ಮಾದಕ ವಸ್ತುವಾಗಿದ್ದು, ಕೇರಳ ರಾಜ್ಯದ ಮಲೆನಾಡು ಪ್ರದೇಶದಿಂದ ಆರೋಪಿಗಳು ತಂದು ಇಲ್ಲಿ ಮಾರಾಟ ಮಾಡುತ್ತಿದ್ದರೆಂದು ಗೊತ್ತಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin