ಗಾಂಜಾ ಮಾರಾಟ : ಇಬ್ಬರ ಬಂಧನ

ಈ ಸುದ್ದಿಯನ್ನು ಶೇರ್ ಮಾಡಿ

arrested

ಕೆಜಿಎಫ್, ನ.21- ಸಾರ್ವಜನಿಕ ಪ್ರದೇಶದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಮಾರಿಕುಪ್ಪಂ ಪೊಲೀಸರು ಬಂಧಿಸಿದ್ದಾರೆ.ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಡಿವೈಎಸ್‍ಪಿ ಪುಟ್ಟಮಾದಯ್ಯ ಹಾಗೂ ಡಿಸಿಬಿ ಇನ್ಸ್‍ಪೆಕ್ಟರ್ ಶಿವಕುಮಾರ್ ಆಂಧ್ರಪ್ರದೇಶ ಕುಪ್ಪಂ ವ್ಯಾಪ್ತಿಯ ಪೆದ್ದೂರು ಗ್ರಾಮದ ನಿವಾಸಿಗಳಾದ ಚಂದ್ರಪ್ಪ ಹಾಗೂ ತಿಮ್ಮಪ್ಪ ಎಂಬುವರನ್ನು ಬಂಧಿಸಿದ್ದಾರೆ.  ಕೆಂಪಾಪುರ ಗ್ರಾಮದ ಚಾಲುಕ್ಯ ಬಾರ್ ಮತ್ತು ರೆಸ್ಟೋರೆಂಟ್ ಬಳಿ ದ್ವಿಚಕ್ರ ವಾಹನದಲ್ಲಿ ಒಂದು ಪ್ಲಾಸ್ಟಿಕ್ ಚೀಲದಲ್ಲಿ ಗಾಂಜಾ ಇಟ್ಟುಕೊಂಡು ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದರು. ಸುಮಾರು 5000 ಸಾವಿರ ಬೆಲೆ ಬಾಳುವ 900ಗ್ರಾಂ ಗಾಂಜಾ ಮತ್ತು ದ್ವಿಚಕ್ರ ವಾಹನ ವಶಪಡಿಸಿಕೊಂಡಿರುವ ಮಾರಿಕುಪ್ಪಂ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

 

► Follow us on –  Facebook / Twitter  / Google+

Facebook Comments

Sri Raghav

Admin